ಮೈಸೂರು,ಮಾರ್ಚ್,31,2025 (www.justkannada.in): ಇಂದು ದೇಶಾದ್ಯಂತ ಮುಸ್ಲಿಮರ ಪವಿತ್ರ ಹಬ್ಬ ರಂಜಾನ್ ಆಚರಣೆ ಹಿನ್ನಲೆ, ಇಂದು ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಸಂಭ್ರಮ ಸಡಗರದಿಂದ ರಂಜಾನ್ ಆಚರಣೆ ಮಾಡಲಾಯಿತು.
ವಕ್ಫ್ ಕಾಯ್ದೆ ತಿದ್ದುಪಡಿ ಮಸೂದೆಗೆ ವಿರೋಧಸಿ ರಾಜ್ಯಾದ್ಯಂತ ಕಪ್ಪು ಪಟ್ಟಿ ಧರಿಸಿ ಮುಸ್ಲಿಂ ಬಾಂಧವರು ನಮಾಜ್ ಮಾಡಿದ್ದಾರೆ. ಮೈಸೂರಿನಲ್ಲೂ ಹಲವೆಡೆ ಕಪ್ಪು ಪಟ್ಟಿ ಧರಿಸಿ ಮುಸ್ಲೀಂ ಬಾಂಧವರು ನಮಾಜ್ ಮಾಡಿದ್ದು ಈ ಮೂಲಕ ವಕ್ಫ್ ಕಾನೂನು ತಿದ್ದುಪಡಿ ವಿರೋಧಿಸಿ ಶಾಂತಿಯುತ ಪ್ರತಿಭಟನೆ ನಡೆಸಿದರು. ಕಪ್ಪು ಪಟ್ಟಿ ಧರಿಸಿ ನಮಾಜ್ ಮಾಡುವುದರ ಮೂಲಕ ವಕ್ಫ್ ಕಾನೂನು ತಿದ್ದುಪಡಿಗೆ ವ್ಯಾಪಕ ವಿರೋಧ ವ್ಯಕ್ತಪಡಿಸಿದರು.
ಮೈಸೂರಿನ ನಗರದ ಈದ್ಗಾ ಮೈದಾನದಲ್ಲಿ ಮುಸಲ್ಮಾನ್ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಪರಸ್ಪರ ಶುಭ ಕೋರಿದರು. ಈ ವೇಳೆ ಶಾಸಕರುಗಳಾದ ತನ್ವೀರ್ ಸೇಠ್, ಹರೀಶ್ ಗೌಡ, ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಸಹ ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗಿಯಾಗಿದ್ದರು.
Key words: Ramadan celebration, Muslim, namaz, wearing, black belts