“ನನ್ನ ಹೆಸರಿನಲ್ಲೇ ರಾಮನಿದ್ದಾನೆ” : ವಿಪಕ್ಷನಾಯಕ ಸಿದ್ದರಾಮಯ್ಯ ಸರಣಿ ಟ್ವೀಟ್

ಬೆಂಗಳೂರು,ಫೆಬ್ರವರಿ,22,2021(www.justkannada.in) : ಸಿದ್ದರಾಮಯ್ಯ ರಾಮನ ವಿರೋಧಿ ಅಂತಾರೆ, ನನ್ನ ಹೆಸರಿನಲ್ಲೇ ರಾಮನಿದ್ದಾನೆ. ಮಹಾತ್ಮ ಗಾಂಧಿಯವರಂತೆ ನಾನು ರಾಮಭಕ್ತನೆ. ದೇಶಕ್ಕೆ ಬೇಕಿರುವುದು ಗಾಂಧಿಯವರ ಆದರ್ಶ ಪುರುಷ ರಾಮ. ಗಾಂಧಿಯವರನ್ನು ಕೊಂದ ಸಂಘಪರಿವಾರದವರು ರಾಮಭಕ್ತರಾಗಲು ಸಾಧ್ಯವೇ? ರಾಮಭಕ್ತರೆಂದರೆ ಕಾಯುವವರೋ? ಕೊಲ್ಲುವವರೋ? ಎಂದು ವಿಪಕ್ಷನಾಯಕ ಸಿದ್ದರಾಮಯ್ಯ ಸರಣಿ ಟ್ವೀಟ್ ಮಾಡಿದ್ದಾರೆ.

jk

ದ್ವೇಷಭಾವನೆ ಬಿತ್ತುವ ಬಿಜೆಪಿಯವರು ಅಲ್ಪಮಾನವರು

ಜಾತಿ, ಧರ್ಮಗಳನ್ನು ಮೀರಿ ಪ್ರತಿಯೊಬ್ಬನನ್ನು ಸಮಾನವಾಗಿ ಕಾಣುವುದೇ ಜಾತ್ಯಾತೀತತೆ. ಇದು ಕುವೆಂಪುರವರ ವಿಶ್ವಮಾನವ ತತ್ವಕ್ಕೆ ಅನುಗುಣವಾಗಿರುವಂತಹುದು. ಧರ್ಮದ ಹೆಸರಿನಲ್ಲಿ ಸಮಾಜ ಒಡೆದು, ದ್ವೇಷಭಾವನೆ ಬಿತ್ತುವ ಬಿಜೆಪಿಯವರು ಅಲ್ಪಮಾನವರು ಎಂದು ಕಿಡಿಕಾರಿದ್ದಾರೆ.

ಸರ್ವಧರ್ಮ ಸಮನ್ವಯತೆಯ ತವರಾಗಿದ್ದ ದಕ್ಷಿಣ ಕನ್ನಡ ಇಂದು ಕೋಮುವಾದದ ಪ್ರಯೋಗಶಾಲೆ

ಒಂದು ಕಾಲದಲ್ಲಿ ಸರ್ವಧರ್ಮ ಸಮನ್ವಯತೆಯ ತವರಾಗಿದ್ದ ದಕ್ಷಿಣ ಕನ್ನಡವನ್ನು ಬಿಜೆಪಿ ನಾಯಕರು ಕೋಮುವಾದದ ಪ್ರಯೋಗಶಾಲೆಯನ್ನಾಗಿ ಮಾಡಿಕೊಂಡಿದ್ದಾರೆ. ಇಲ್ಲಿನ ಜನ ಪರಸ್ಪರ ಅಪನಂಬಿಕೆಯಿಂದ ಜೀವನ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದ್ದರೆ ಅದಕ್ಕೆ ಆರ್.ಎಸ್.ಎಸ್ ಮತ್ತು ಬಿಜೆಪಿಯೇ ಕಾರಣ ಎಂದು ಆರೋಪಿಸಿದ್ದಾರೆ.

ದೇಶದ ಉತ್ಪಾದನಾ ವಲಯ ನಿಷ್ಕ್ರಿಯಗೊಂಡಿದೆ

My-name-There-Rama-Opposition-Leader-Siddaramaiah-Series-Tweet

ಕೇಂದ್ರ ಸರ್ಕಾರದ ಕೆಟ್ಟ ಆರ್ಥಿಕ ನೀತಿಗಳಿಂದಾಗಿ ಇಂದು ದೇಶದ ಉತ್ಪಾದನಾ ವಲಯ ನಿಷ್ಕ್ರಿಯಗೊಂಡಿದೆ. ದಕ್ಷಿಣ ಕನ್ನಡ ಭಾಗದಲ್ಲಿ ಬೀಡಿ ಉದ್ಯಮವನ್ನು ನಂಬಿಕೊಂಡಿದ್ದ 50,000 ಜನರ ಬದುಕು ಬೀದಿಪಾಲಾಗಿದೆ. ಇದರ ಪುನಶ್ಚೇತನಕ್ಕಾಗಿ ಬಿಜೆಪಿ ಸರ್ಕಾರ ಯಾವ ಕ್ರಮ ಕೈಗೊಂಡಿದೆ? ಎಂದು ಪ್ರಶ್ನೆ ಮಾಡಿದ್ದಾರೆ.

 ಪ್ರತೀ ವ್ಯಕ್ತಿಗೆ ಉಚಿತವಾಗಿ ತಲಾ 10 ಕೆ.ಜಿ ಅಕ್ಕಿ

ಬಿಜೆಪಿ ಸರ್ಕಾರ ಅನ್ನಭಾಗ್ಯದ ಅಕ್ಕಿ ಪ್ರಮಾಣವನ್ನು 3 ಕೆ.ಜಿ ಗೆ ಇಳಿಸಿ ಬಡಜನರ ಊಟ ಕಸಿದಿದೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಪಡೆದು ಅಧಿಕಾರಕ್ಕೆ ಬರುವ ಸಂಪೂರ್ಣ ವಿಶ್ವಾಸ ನನಗಿದೆ. ಆಗ ಪ್ರತೀ ವ್ಯಕ್ತಿಗೆ ಉಚಿತವಾಗಿ ತಲಾ 10 ಕೆ.ಜಿ ಅಕ್ಕಿ ನೀಡುತ್ತೇವೆ ಎಂದು ವಿಶ್ವಾಸವ್ಯಕ್ತಪಡಿಸಿದ್ದಾರೆ.

ಗಾಂಧಿ ಕೊಂದವರು ಇವತ್ತು ದೇಶಪ್ರೇಮದ ಪಾಠ ಮಾಡುತ್ತಾರೆ

ಹೆಡ್ಗೇವಾರ್, ಗೊಲ್ವಾಲ್ಕರ್ ಇವರೆಲ್ಲ ಸ್ವಾತಂತ್ರ್ಯ ಚಳವಳಿಯಿಂದ ದೂರ ಉಳಿದದ್ದು ಯಾಕೆ? ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹಾತ್ಮ ಗಾಂಧಿಯವರನ್ನು ಕೊಂದವರು ಇವತ್ತು ದೇಶಪ್ರೇಮದ ಪಾಠ ಮಾಡುತ್ತಾರೆ. ಇಂಥವರ ದೇಶಪ್ರೇಮದ ಪಾಠ ಯಾರಿಗೆ ಬೇಕಿದೆ ಸ್ವಾಮಿ?  ಎಂದು ಆಕ್ರೋಶವ್ಯಕ್ತಪಡಿಸಿದ್ದಾರೆ.

ಸ್ವಾತಂತ್ರ್ಯಕ್ಕಾಗಿ ಸಾವಿರಾರು ಕಾಂಗ್ರೆಸ್ ನಾಯಕರು ಬಲಿದಾನಗೈದಿದ್ದಾರೆ

My-name-There-Rama-Opposition-Leader-Siddaramaiah-Series-Tweet

ದೇಶಪ್ರೇಮದ ಪಾಠ ಮಾಡುವ ಬಿಜೆಪಿ ನಾಯಕರು ತಮ್ಮ ಇತಿಹಾಸವನ್ನೊಮ್ಮೆ ನೆನಪು ಮಾಡಿಕೊಳ್ಳಲಿ. ದೇಶದ ಸ್ವಾತಂತ್ರ್ಯಕ್ಕಾಗಿ ಸಾವಿರಾರು ಕಾಂಗ್ರೆಸ್ ನಾಯಕರು ಬಲಿದಾನಗೈದಿದ್ದಾರೆ. ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪ್ರಾಣಾರ್ಪಣೆ ಮಾಡಿದ ಒಬ್ಬನೇ ಒಬ್ಬ ಆರ್.ಎಸ್‌.ಎಸ್ ನಾಯಕನ ಹೆಸರನ್ನು ಬಿಜೆಪಿಯವರು ಹೇಳಲಿ ನೋಡೋಣ ಎಂದು ಟ್ವೀಟ್ ಮಾಡಿದ್ದಾರೆ.

key words : My-name-There-Rama-Opposition-Leader-Siddaramaiah-Series-Tweet