ಮೈಸೂರು,ಡಿ,27,2019(www.justkannada.in) : ಬೆಳ್ಳಂಬೆಳೀಗ್ಗೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಜೆಸಿಬಿ ಘರ್ಜನೆ ಮಾಡಿದ್ದು ನಗರದಲ್ಲಿ ಅಕ್ರಮವಾಗಿ ತಲೆ ಎತ್ತಿದ್ದ ಪುಟ್ ಪಾತ್ ಮಳಿಗೆಗಳನ್ನ ಅಧಿಕಾರಿಗಳ ನೇತೃತ್ವದಲ್ಲಿ ತೆರವುಗೊಳಿಸಲಾಯಿತು.
ಮೈಸೂರಿನ ವಿಜಯನಗರದಲ್ಲಿ ಅಕ್ರಮವಾಗಿ ತಲೆಎತ್ತಿದ್ದ ಪೆಟ್ಟಿಗೆ ಅಂಗಡಿಗಳನ್ನ ವಲಯ ಕಚೇರಿ 5ರ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ತೆರವುಗೊಳಿಸಲಾಯಿತು. ಹೆಲ್ತ್ ಇನ್ಸ್ ಪೆಕ್ಟರ್ ಶೃತಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಯೋಗಾನರಸಿಂಹಸ್ವಾಮಿ ದೇವಸ್ಥಾನದ ಸುತ್ತಮುತ್ತಲು ಇದ್ದ ಐದಕ್ಕೂ ಹೆಚ್ಚು ಪೆಟ್ಟಿಗೆ ಅಂಗಡಿಗಳನ್ನ ತೆರವುಗೊಳಿಸಲಾಯಿತು.
ಇನ್ನು ನೋಟೀಸ್ ನೀಡದೆ ಕ್ರಮ ಕೈಗೊಂಡಿರುವ ಬಗ್ಗೆ ಪೆಟ್ಟಿಗೆಅಂಗಡಿ ಮಾಲೀಕರು ಅಸಮಾಧಾನ ವ್ಯಕ್ತಪಡಿಸಿದ್ದು, ಫುಟ್ಪಾತ್ ತೆರವು ಕಾರ್ಯಾಚರಣೆ ದುರುದ್ದೇಶದಿಂದ ಕೂಡಿದೆ ಎಂದು ಬೀದಿಬದಿ ವ್ಯಾಪಾರಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾಲು ಮರಗಳ ಹಿಂದೆ ಪೆಟ್ಟಿಗೆ ಅಂಗಡಿಗಳನ್ನಿಟ್ಟು ಜೀವನ ನಡೆಸುತ್ತಿದ್ದೇವೆ. ನಮ್ಮ ಪೆಟ್ಟಿಗೆ ಅಂಗಡಿಗಳಿಂದ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗುತ್ತಿಲ್ಲ. ಟ್ರಾಫಿಕ್ ಸಮಸ್ಯೆಗಳೂ ಇಲ್ಲ. ಆದರೂ ಪಾಲಿಕೆ ಅಧಿಕಾರಿಗಳು ಅಂಗಡಿಗಳನ್ನ ತೆರವುಗೊಳಿಸುತ್ತಿದ್ದಾರೆ. ರಸ್ತೆಬದಿ ವ್ಯಾಪಾರವನನ್ನೇ ನಂಬಿ ಬದುಕುತ್ತಿರುವ ನಾವು ಎಲ್ಲಿ ಹೋಗಬೇಕು ಎಂದು ಪೆಟ್ಟಿಗೆ ಅಂಗಡಿ ಮಾಲೀಕರು ಪ್ರಶ್ನಿಸಿದ್ದಾರೆ.
ಅಲ್ಲದೆ ನಮಗೆ ಮೈಸೂರು ಮಹಾನಗರ ಪಾಲಿಕೆ ನಮಗೆ ಪರ್ಯಾಯ ವ್ಯವಸ್ಥೆ ಮಾಡಿಕೊಡಬೇಕೆಂದು ರಸ್ತೆಬದಿ ವ್ಯಾಪಾರಿಗಳ ಒತ್ತಾಯಿಸಿದ್ದಾರೆ.
Key words: Mysore- JCB-Clearing operation -put paths-shop