ಮೈಸೂರು.ಮಾರ್ಚ್.17.2021(www.justkannada.in): ಸರ್ಕಾರದ ಆದೇಶದಂತೆ ಆಡಳಿತವನ್ನು ಜನರ ಬಳಿಗೆ ಕೊಂಡಯ್ದು ಅವರ ಸಮಸ್ಯೆಗಳನ್ನು ತಳಮಟ್ಟದಿಂದಲೇ ಪರಿಹರಿಸುವ ನಿಟ್ಟಿನಲ್ಲಿ ’ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ’ ಎಂಬ ಕಾರ್ಯಕ್ರಮದಡಿ ಜಿಲ್ಲಾಧಿಕಾರಿಗಳು, ಉಪವಿಭಾಗಾಧಿಕಾರಿಗಳು, ತಹಶೀಲ್ದಾರ್ ಸೇರಿದಂತೆ ಇತರೆ ಅಧಿಕಾರಿಗಳು 2021ರ ಮಾರ್ಚ್ 20ರಂದು ಹೆಚ್.ಡಿ.ಕೋಟೆ ತಾಲ್ಲೂಕಿನ ಕಸಬಾ ಹೋಬಳಿಯ ಎಲೆಹುಂಡಿ ಗ್ರಾಮದಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ಗ್ರಾಮಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಕಂದಾಯ ಇಲಾಖೆಗೆ ಸಂಬಂಧಿಸಿದ ಪಹಣಿ ದಾಖಲೆಗಳು, ಸಾಮಾಜಿಕ ಭದ್ರತಾ ಯೋಜನೆ, ಪೋಡಿ ಕ್ರಮ, ಸ್ಮಶಾನ ಹಾಗೂ ಆಶ್ರಯ ನಿವೇಶನದ ಉದ್ದೇಶಕ್ಕೆ ಜಮೀನು ಕಾಯ್ದಿರಿಸುವ ವಿಷಯ ಮತ್ತು ನಾಡಕಚೇರಿ ಸೇವೆಗಳ ಬಗ್ಗೆ ಅಧಿಕಾರಿಗಳು ಜನರ ಸಮಸ್ಯೆಗಳನ್ನು ಆಲಿಸಲಿದ್ದಾರೆ.
ಅತಿವೃಷ್ಠಿ ವಿಷಯಗಳು ಮತ್ತು ಕಂದಾಯ ಇಲಾಖೆಯ ಇತರೆ ವಿಷಯಗಳ ಕುರಿತು ಸಮಸ್ಯೆಗಳನ್ನು ಗ್ರಾಮದಲ್ಲಿಯೇ ಬಗೆಹರಿಸಲು ಹಾಗೂ ವಿವಿಧ ಹಂತದಲ್ಲಿ ವಿಚಾರಣೆಯ ಅಗತ್ಯವಿದ್ದಲ್ಲಿ ಕ್ರಮವಹಿಸಿ, ಅರ್ಹ ಫಲಾನುಭವಿಗಳಿಗೆ ಸೌಲಭ್ಯವನ್ನು ವಿತರಿಸಲಾಗುತ್ತದೆ.
ಈ ಹಿನ್ನೆಲೆ ಗ್ರಾಮಸ್ಥರು ಸಮಸ್ಯೆಗಳ ಬಗ್ಗೆ ಮುಂಚಿತವಾಗಿಯೇ ಸಂಬಂಧಪಟ್ಟ ನಾಡಕಚೇರಿ, ಉಪ ತಹಶೀಲ್ದರ್, ರಾಜಸ್ವ ನಿರೀಕ್ಷರಿಗೆ ತಮ್ಮ ಮನವಿಗಳನ್ನು ಸಲ್ಲಿಸಿ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬಹುದು ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Key words: Mysore – 20th –march-DC-elehundi grama-stay program