ಮೈಸೂರು,ಫೆಬ್ರವರಿ,17,2021(www.justkannada.in): ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸರಗಳ್ಳರ ಹಾವಳಿ ಮುಂದುವರೆದಿದ್ದು ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಮಹಿಳೆ ಸರ ಕದ್ದು ಪರಾರಿಯಾದ ಘಟನೆ ನಡೆದಿದೆ.
ಕುವೆಂಪು ನಗರದ ನವಿಲು ರಸ್ತೆಯಲ್ಲಿ ಘಟನೆ ನಡೆದಿದೆ. ಸಾವಿತ್ರಮ್ಮ (55) ಸರ ಕಳೆದುಕೊಂಡ ಮಹಿಳೆ. ಸಾವಿತ್ರಮ್ಮ ಅಂಗಡಿಯಿಂದ ಹಾಲು ತೆಗೆದುಕೊಂಡ ಹೋಗುವ ಸಂದರ್ಭದಲ್ಲಿ ಬೈಕ್ ನಲ್ಲಿ ಬಂದ ಕಳ್ಳರು ಈ ದುಷ್ಕೃತ್ಯವೆಸಗಿದ್ದಾರೆ.

ಘಟನೆಯಲ್ಲಿ ಸಾವಿತ್ರಮ್ಮಗೆ ತಲೆಗೆ ಗಂಭೀರ ಗಾಯಗಳಾಗಿದ್ದು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಕುವೆಂಪು ನಗರ ಪೋಲೀಸರು ಭೇಟಿ ನೀಡಿ ಪರೀಶಿಲನೆ ನಡೆಸಿದ್ದು ಈ ಕುರಿತು ಕುವೆಂಪು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Key words: Mysore- chain snatching-women-bike