ಮೈಸೂರು,ಆಗಸ್ಟ್,26,2020(www.justkannada.in): ಕಳೆದ 5 ತಿಂಗಳಿಂದ ವೇತನ ನೀಡಿಲ್ಲ ಎಂದು ಆರೋಪಿಸಿ ಮೈಸೂರು ಮಹಾನಗರ ಪಾಲಿಕೆ ಪೌರ ಕಾರ್ಮಿಕರು ಸ್ವಚ್ಛತಾ ಕಾರ್ಯ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಿದರು.
ಮೈಸೂರು ಮಹಾನಗರ ಪಾಲಿಕೆ ಮುಂಭಾಗದಲ್ಲಿ ಪೌರಕಾರ್ಮಿಕರು ಬೃಹತ್ ಪ್ರತಿಭಟನೆ ನಡೆಸಿ ಪಾಲಿಕೆ ಅಧಿಕಾರಿಗಳ ವಿರುದ್ದ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಐದು ತಿಂಗಳಿನಿಂದ ಪೌರಕಾರ್ಮಿಕರಿಗೆ ವೇತನ ನೀಡಿಲ್ಲ. ನೇರ ಪಾವತಿ ಅಡಿಯಲ್ಲಿ ವೇತನ ನೀಡುವಂತೆ ಡಿಸಿ ಆದೇಶಿಸಿದ್ದರು. ಆದರೆ ಜಿಲ್ಲಾಧಿಕಾರಿಗಳ ಆದೇಶವಿದ್ದರೂ ಪಾಲಿಕೆ ಅಧಿಕಾರಿಗಳು ಈ ಬಗ್ಗೆ ಕ್ಯಾರೆ ಎನ್ನುತ್ತಿಲ್ಲ ಎಂದು ಪ್ರತಿಭಟನಾನಿರತ ಪೌರಕಾರ್ಮಿಕರು ಕಿಡಿಕಾರಿದರು.
ಹಾಗೆಯೇ ಡಿ.ಸಿ ಆದೇಶದಂತೆ ಕೂಡಲೇ ಪಾಲಿಕೆ ಅಧಿಕಾರಿಗಳು ನೇರ ವೇತನ ಜಾರಿಗೊಳಿಸಬೇಕು. ಕೋವಿಡ್ ನಿಂದ ಮೃತರಾದ ಪೌರ ಕಾರ್ಮಿಕರಿಗೆ 30 ಲಕ್ಷ ಪರಿಹಾರ ಘೋಷಣೆ ಮಾಡಬೇಕು. ಇಲ್ಲದಿದ್ದರೇ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುತ್ತದೆ ಎಂದು ಪೌರ ಕಾರ್ಮಿಕರು ಎಚ್ಚರಿಕೆ ನೀಡಿದರು.
Key words: mysore- city corporation – civilian worker- Protest- salary