ಮೈಸೂರು,ಏಪ್ರಿಲ್,20.2021(www.justkannada.in): ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕೊರೋನಾ ಪ್ರಕರಣ ಹೆಚ್ಚಾಗುತ್ತಿದ್ದರೂ ಅದನ್ನ ಲೆಕ್ಕಿಸದೆ ಕೋವಿಡ್ ನಿಯಮ ಉಲ್ಲಂಘಿಸಿದವರ ವಿರುದ್ದ ಪ್ರಕರಣ ದಾಖಲಿಸುವ ಮೂಲಕ ನಗರ ಪೊಲೀಸರು ಕಾನೂನು ರೀತಿಯಲ್ಲಿ ಕ್ರಮ ಕೈಗೊಂಡಿದ್ದಾರೆ.
ಕೋವಿಡ್-19 ಹರಡುವಿಕೆಯ 2ನೇ ಅಲೆಯ ಹಿನ್ನಲೆಯಲ್ಲಿ ಸರ್ಕಾರವು ಕಟ್ಟುನಿಟ್ಟಿನ ನಿಯಮಗಳನ್ನು ಹೊರಡಿಸಿದೆ. ಇವುಗಳ ಜಾರಿ ಸಂಬಂಧ ಮೈಸೂರು ನಗರ ಪೊಲೀಸರು ಎಲ್ಲಾ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದಾರೆ.
ನಿನ್ನೆ ಮೈಸೂರು ನಗರದ ಪೊಲೀಸರು ನಗರದ ವಿವಿಧ ಸ್ಥಳಗಳಲ್ಲಿ ಪರಿಶೀಲಿಸಿ, ಸಾಮಾಜಿಕ ಅಂತರವಿಲ್ಲದೆ. ಮಾಸ್ಕ್ ಧರಿಸದೆ ಇರುವ ಸಾರ್ವಜನಿಕರು/ಗ್ರಾಹಕರೊಂದಿಗೆ ವ್ಯಾಪಾರ ವ್ಯವಹಾರ ನಡೆಸುವ ಮೂಲಕ ಕೋವಿಡ್-19 ನಿಯಮಗಳನ್ನು ಉಲ್ಲಂಘನೆ ಮಾಡಿರುವವರ ವಿರುದ್ಧ ಭಾರತೀಯ ದಂಡ ಸಂಹಿತೆ (ಐ.ಪಿ.ಸಿ) ಹಾಗೂ The Disaster Management act-2005ರ ಅಡಿಯಲ್ಲಿ ಕಾನೂನು ಕ್ರಮ ಕೈಗೊಂಡಿದ್ದಾರೆ.
ವಿದ್ಯಾರಣ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಅಶ್ವಿನಿ ಕಲ್ಯಾಣ ಮಂಟಪದಲ್ಲಿ ಮದುವೆ ಕಾರ್ಯದ ಉಸ್ತುವಾರಿ ವಹಿಸಿದ್ದ ಮಾದೇಗೌಡ ಬಿದರಗೂರು ಗ್ರಾಮ ಎಂಬುವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಹಾಗೆಯೇ ಮಂಡಿ ಪೊಲೀಸ್ ಠಾಣಾ ವ್ಯಾಪ್ತಿಯ ಎಸ್ ಆರ್ ರಸ್ತೆ ಖಾಸಗಿ ಬಸ್ ನಿಲ್ದಾಣದ ಬಳಿಯಲ್ಲಿರುವ ಹೋಟೆಲ್ ನ್ಯೂ ವೈಭವ್ ಲಕ್ಷುರಿ ಬಾರ್ ನ ಮ್ಯಾನೇಜರ್ ರವರ ವಿರುದ್ಧ ಪ್ರಕರಣ ದಾಖಲಸಲಾಗಿದೆ.
ದೇವರಾಜ ಪೊಲೀಸ್ ಠಾಣಾ ವ್ಯಾಪ್ತಿಯ ವಿನೋಬಾ ರಸ್ತೆಯ ವಿಶಾಲ್ ಮಗಾ ಮಾರ್ಟ್ ಮಾಲ್ ನ ಮಾಲೀಕರು/ಮ್ಯಾನೇಜರ್ ಅವರ ವಿರುದ್ಧ ಪ್ರಕರಣ ದಾಖಲಸಲಾಗಿದೆ. ದೇವರಾಜ ಪೋಲೀಸ್ ಠಾಣಾ ವ್ಯಾಪ್ತಿಯ ಲೋಕಾಭಿರಾಮ ಸಮುದಾಯ ಭವನದಲ್ಲಿ ಮದುವೆ ಕಾರ್ಯವನ್ನು ಆಯೋಜಿಸಿದ್ದ ಆಯೋಜಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಲಷ್ಕರ್ ಮೊಲೀಸ್ ಠಾಣಾ ಸರಹದ್ದಿನಲ್ಲಿರುವ ಕೆ.ಟಿ. ಸ್ಟ್ರೀಟ್ ನಲ್ಲಿರುವ ಆನಂದ್ ಬ್ರದರ್ಸ್ನ ಮಾಲೀಕರ ಶ್ರೀನಿವಾಸ್ ಎಂಬುವರ ವಿರುದ್ಧ ಪ್ರಕರಣ ದಾಖಂಸಲಾಗಿದೆ. ಆಲನಹಳ್ಳಿ ಪೊಲೀಸ್ ಠಾಣಾ ಸರಹದ್ದಿನಲ್ಲಿರುವ 2 ಪಿನ್ ರೆಸ್ಟೋರೆಂಟ್ ನ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಉದಯಗಿರಿ ಪೊಲೀಸ್ ಠಾಣಾ ಸರಹದ್ದಿನ ಮಹದೇವಪುರ ಮುಖ್ಯರಸ್ತೆಯಲ್ಲಿರುವ ಹೋಟೆಲ್ ಮಾಲೀಕರಾದ ಮಹಮ್ಮದ್ ರಜಾಕ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಕೋವಿಡ್-19 ನಿಯಮಗಳ ಜಾರಿ ಸಂಬಂಧ ನಗರ ಪೊಲೀಸರು ಇದೇ ರೀತಿ ಪ್ರತಿ ದಿನ ಸಾರ್ವಜನಿಕರು ಹೆಚ್ಚು ಸೇರುವ ಸ್ಥಳಗಳ ಕಡೆ ಭೇಟಿ ನೀಡಿ ಪರಿಶೀಲಿಸಿ ನಿಯಮ ಉಲ್ಲಂಘನೆ ಮಾಡುವವರ ವಿರುದ್ಧ ಪ್ರಕರಣಗಳನ್ನು ದಾಖಲಿಸಲಿದ್ದು. ಮಾಸ್ಕ್ ಧರಿಸದೇ ಇರುವ ಸಾರ್ವಜನಿಕರಿಗೆ ಸ್ಥಳದಲ್ಲಿ ದಂಡವನ್ನು ವಿಧಿಸಲಾಗುವುದು ಎಂದು ನಗರದ ಪೊಲೀಸ್ ಆಯುಕ್ತರಾದ ಡಾ: ಚಂದ್ರಗುಪ್ತ ಎಚ್ಚರಿಕೆ ನೀಡಿದ್ದಾರೆ.
Key words: Mysore city –police-Case -filed -against -violators – covid Law