ಮೈಸೂರು,ಆ,18,2020(www.justkannada.in): ಸಾಂಸ್ಕೃತಿಕ ನಗರಿ ಮೈಸೂರು ಈ ಬಾರಿಯೂ ಸ್ವಚ್ಚ ಸರ್ವೇಕ್ಷಣೆ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದು, ಟಾಪ್ ಟೆನ್ ಸ್ವಚ್ಚತಾ ನಗರಗಳ ಪಟ್ಟಿಯಲ್ಲಿ ಮೈಸೂರು ಸಹ ಸ್ಥಾನ ಪಡೆದಿದೆ.
ಈ ನಡುವೆ ಕೊರೋನಾ ಹಿನ್ನೆಲೆ ಮುಂದೂಡಲಾಗಿದ್ದ ಸ್ವಚ್ಚ ಸರ್ವೇಕ್ಷಣೆ 2020 ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಆಗಸ್ಟ್ 20ರ ಬೆಳಿಗ್ಗೆ 11 ಗಂಟೆಗೆ ಆಯೋಜನೆ ಮಾಡಲಾಗಿದೆ. ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ವರ್ಚುವಲ್ ಲೈವ್ ಮೂಲಕ ಟಾಪ್ ಟೆನ್ ನಲ್ಲಿರುವ ಸ್ವಚ್ಚತಾ ನಗರಗಳಿಗೆ ಪ್ರಶಸ್ತಿ ವಿತರಣೆ ಮಾಡಲಿದ್ದಾರೆ. ಟಾಪ್ ಟೆನ್ ಸ್ವಚ್ಚತಾ ನಗರಗಳ ಪಟ್ಟಿಯಲ್ಲಿ ಸಾಂಸ್ಕೃತಿಕ ನಗರಿ ಮೈಸೂರು ಸಹ ಸ್ಥಾನ ಗಿಟ್ಟಿಸಿಕೊಂಡಿದ್ದು. ಮೈಸೂರು ಜಿಲ್ಲಾಡಳಿತ ಮತ್ತು ಪಾಲಿಕೆ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಶಸ್ತಿ ಸ್ವೀಕರಿಸಲಿದ್ದಾರೆ.
ಮೈಸೂರಿನ ಪೌರಕಾರ್ಮಿಕರ ಜೊತೆ ಪ್ರಧಾನಿ ಮೋದಿ ಮಾತು.
ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಮೈಸೂರಿನ ಇಬ್ಬರು ಪೌರ ಕಾರ್ಮಿಕರೊಂದಿಗೆ ಆನ್ ಲೈನ್ ಮೂಲಕ ಮಾತನಾಡಲಿದ್ದಾರೆ. ಪೌರಕಾರ್ಮಿಕರಾದ ನಂಜುಡಸ್ವಾಮಿ ಹಾಗೂ ಮಂಜುಳಾ ಜೊತೆ ಮಾತುಕತೆ ನಡೆಸಲಿದ್ದಾರೆ.
ಇನ್ನು ನಗರದ ಅರಮನೆ ಆವರಣದಲ್ಲಿ ವರ್ಚುವಲ್ ಲೈವ್ ಕಾರ್ಯಕ್ರಮಕ್ಕೆ ಸಿದ್ಧತೆ ನಡೆಸಲಾಗಿದೆ. ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಅಭಿರಾಮ್ ಜಿ ಶಂಕರ್, ಮೇಯರ್ ತಸ್ಲೀಂ, ಪಾಲಿಕೆ ಆಯುಕ್ತರು, ಆರೋಗ್ಯಾಧಿಕಾರಿಗಳು ಹಾಗೂ ಪೌರಕಾರ್ಮಿಕರು ಭಾಗಿಯಾಗಲಿದ್ದಾರೆ ಎಂದು ಪಾಲಿಕೆ ಆರೋಗ್ಯಾಧಿಕಾರಿ ಡಾ.ನಾಗರಾಜ್ ಮಾಹಿತಿ ನೀಡಿದ್ದಾರೆ.
Key words: Mysore- Clean city-Award-PM Modi- august 20