ಮೈಸೂರು,ಅಕ್ಟೋಬರ್,26,2024 (www.justkannada.in): ಆದಷ್ಟು ಬೇಗ ಎಲ್ಲಾ ಮ್ಯಾನುವಲ್ ಸ್ಕ್ಯಾವೆಂಜರ್ ಗಳ ಸರ್ವೇ ಸಮೀಕ್ಷೆ ಮುಗಿಸಿ ಈ ಸಮಾಜಕ್ಕೆ ನ್ಯಾಯ ಒದಗಿಸಬೇಕು ಎಂದು ರಾಜ್ಯ ಪೌರ ಕಾರ್ಮಿಕರ ಸಂಘದ ಜಿಲ್ಲಾಧ್ಯಕ್ಷ ಆರ್ಟಿಸ್ಟ್ ನಾಗರಾಜು ಆಗ್ರಹಿಸಿದರು.
ಕರ್ನಾಟಕ ರಾಜ್ಯ ನಗರಪಾಲಿಕೆ, ನಗರಸಭೆ, ಪುರಸಭೆಗಳ ಪೌರ ಕಾರ್ಮಿಕರ ಮಹಾ ಸಂಘದಿಂದ ಮೈಸೂರಿನ ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಯಿತು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಜ್ಯ ಪೌರ ಕಾರ್ಮಿಕರ ಸಂಘದ ಜಿಲ್ಲಾಧ್ಯಕ್ಷ ಆರ್ಟಿಸ್ಟ್ ನಾಗರಾಜು, ಮ್ಯಾನುವಲ್ ಸ್ಕ್ಯಾವೆಂಜರ್ ಮರು ಸರ್ವೇ ಸಮೀಕ್ಷೆಗೆ ಸರ್ವೋಚ್ಚ ನ್ಯಾಯಾಲಯ ಆದೇಶ ನೀಡಿದೆ. ಮೈಸೂರು ಜಿಲ್ಲೆ ಸರ್ವೇ ಕಾರ್ಯ ವಿಳಂಬವಾಗುತ್ತಿದೆ. ಸರ್ವೇ ಸಮೀಕ್ಷೆಯನ್ನ ನಿಗದಿತ ಸಮಯದೊಳಗೆ ಮುಗಿಸಬೇಕು ಎಂದು ಒತ್ತಾಯಿಸಿದರು.
ರಾಜ್ಯದಲ್ಲಿ 7483 ಮ್ಯಾನುವಲ್ ಸ್ಕ್ಯಾವೆಂಜರ್ ಪಟ್ಟಿ ಅನುಮೋದನೆ ಮಾಡಿದೆ. ಇದರಲ್ಲಿ 2927 ಮ್ಯಾನುವಲ್ ಸ್ಕ್ಯಾವೆಂಜರ್ ಗಳಿಗೆ ಗುರುತಿನ ಚೀಟಿ ನೀಡಲಾಗಿದೆ. 4566 ಮ್ಯಾನುವಲ್ ಸ್ಕ್ಯಾವೆಂಜರ್ ಗಳಿಗೆ ಗುರುತಿನ ಚೀಟಿ ನೀಡದೆ ಸೌಲಭ್ಯದಿಂದ ವಂಚಿತರಾಗಿದ್ದಾರೆ. ಮೈಸೂರಿನ ಸಮಾಜ ಕಲ್ಯಾಣಧಿಕಾರಿ ರಂಗೇಗೌಡರ ನಿರ್ಲಕ್ಷ್ಯ ಕಾರಣದಿಂದ ಮೈಸೂರಿನಲ್ಲಿ ಮ್ಯಾನುವಲ್ ಸ್ಕ್ಯಾವೆಂಜರ್ ಗಳಿಗೆ ಅನ್ಯಾಯವಾಗಿದೆ. ಆದಷ್ಟು ಬೇಗ ಎಲ್ಲಾ ಮ್ಯಾನುವಲ್ ಸ್ಕ್ಯಾವೆಂಜರ್ ಗಳ ಸರ್ವೇ ಸಮೀಕ್ಷೆ ಮುಗಿಸಿ ಈ ಸಮಾಜಕ್ಕೆ ನ್ಯಾಯ ಒದಗಿಸಬೇಕು ಎಂದು ಆರ್ಟಿಸ್ಟ್ ನಾಗರಾಜು ಆಗ್ರಹಿಸಿದರು.
Key words: mysore, complete, survey, manual scavengers