ಮೈಸೂರು,ನವೆಂಬರ್,27,2021(www.justkannada.in): ಕಳೆದ ಲೋಕಸಭೆ ಚುನಾವಣೆ ವೇಳೆ ಬಿಜೆಪಿ ಸೇರಿದ್ಧ ಮಾಜಿ ಸಚಿವ ಎ. ಮಂಜು ಇದೀಗ ಮತ್ತೆ ಕಾಂಗ್ರೆಸ್ ನತ್ತ ಮುಖ ಮಾಡುತ್ತಿದ್ದಾರೆ ಎನ್ನುವ ಸುದ್ಧಿ ಹಬ್ಬಿದೆ. ಈ ಕುರಿತು ಮಾತನಾಡಿರುವ ಮಾಜಿ ಸಿಎಂ ಸಿದ್ಧರಾಮಯ್ಯ, ಎ.ಮಂಜು ಕಾಂಗ್ರೆಸ್ ಸೇರಲ್ಲ. ಅವರು ಕಾಂಗ್ರೆಸ್ ಗೆ ಬರುವುದಾಗಿಯೂ ಕೇಳಿಲ್ಲ. ಬಂದರೂ ನಾವು ಸೇರಿಸಿಕೊಳ್ಳಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ವಿಧಾನ ಪರಿಷತ್ತು ಚುನಾವಣೆ ಕುರಿತು ಮೈಸೂರಿನಲ್ಲಿ ಮಾತನಾಡಿದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಯಾರೊಂದಿಗೂ ಹೊಂದಾಣಿಕೆ ಇಲ್ಲ. ನಾವು ಯಾವ ಕ್ಷೇತ್ರದಲ್ಲೂ ಯಾರೊಂದಿಗೂ ಹೊಂದಾಣಿಕೆ ಮಾಡಿಕೊಳ್ಳಲ್ಲ. ನಮ್ಮ ಬೆಂಬಲಿತರಿಗೆ ಸಿಂಗಲ್ ವೋಟ್ ಹಾಕಲು ಸೂಚನೆ ಕೊಟ್ಟಿದ್ದೇನೆ. ಬಿಜೆಪಿ – ಜೆಡಿಎಸ್ ನಡುವೆ ಒಳ ಒಪ್ಪಂದ ಇದ್ದೇ ಇದೆ. ಈ ಚುನಾವಣೆಯಲ್ಲಿ ಮಾತ್ರ ಅಲ್ಲ.ಇತ್ತೀಚೆಗೆ ನಡೆದ ಉಪಚುನಾವಣೆ ಸೇರಿದಂತೆ ಎಲ್ಲ ಚುನಾವಣೆಗಳಲ್ಲೂ ಅವರಿಬ್ಬರೂ ಒಳ ಒಪ್ಪಂದ ಮಾಡಿಕೊಂಡೇ ಚುನಾವಣೆ ಮಾಡಿದ್ದಾರೆ ಎಂದು ಲೇವಡಿ ಮಾಡಿದರು.
ಬೆಳಗಾವಿಯಲ್ಲಿ ಲಖನ್ ಜಾರಕಿಹೊಳಿ ಕಣಕ್ಕೆ ಇಳಿಸಿರೋದು ಬಿಜೆಪಿಯವರು. ನಮ್ಮವರು ನಮ್ಮ ಪರ ಕೆಲಸ ಮಾಡ್ತಿದ್ದಾರೆ. ಲಖನ್ ಜಾರಕಿಹೋಳಿ ಬಿಜೆಪಿಯಲ್ಲೇ ಇದ್ದವರು. ಹೀಗಾಗಿ ಗೊಂದಲ ಇರೋದು ಬಿಜೆಪಿಯಲ್ಲಿ. ಕೊಡಗಿನಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೇ ನೇರ ಹಣಾಹಣಿ ಇದೆ. ನಾವು ಕಳೆದ ಬಾರಿ ಅಲ್ಪ ಮತದಿಂದ ಸೋತಿದ್ದೇವೆ. ಈ ಬಾರಿ ನಮ್ಮ ಅಭ್ಯರ್ಥಿ ಗೆಲ್ಲಿಸಲು ಎಲ್ಲ ಪ್ರಯತ್ನ ಮಾಡುತ್ತೇವೆ. ಎಂದು ಸಿದ್ಧರಾಮಯ್ಯ ನುಡಿದರು.
Key words: mysore- Congress-No entry – A. Manju-former CM- Siddaramaiah.
ENGLISH SUMMARY…
No entry for A. Manju to Congress party – Siddaramaiah
Mysuru, November 27, 2021 (www.justkannada.in): Rumors are making rounds that former Minister A. Manju, who had migrated to the BJP during the last Lok Sabha elections is planning to return to the Congress party. However, former Chief Minister Siddaramaiah has clarified that A. Manju is not returning to the party. “He has not asked us that he would return to the Congress, even if he intends we won’t allow him,” he said.
Speaking at Mysuru about the legislative council elections in Mysuru today, the leader of Opposition Siddaramaiah informed that the Congress party has not allied with any party in any constituency. “We have informed all our supporters to put single vote. The BJP-JDS has allied the screen. Not only now, but they also had a nexus even during the byelections,” he alleged.
“In Belagavi, the BJP has fielded Lakhan Jarkiholi. However, our party workers are doing their work. Lakhan Jarkiholi was in the BJP itself. Hence, if there is any confusion, it should be in the BJP. There is a direct fight between Congress and the BJP in Kodagu. Last time we had lost from a thin margin. However, we are making all efforts to register a victory there,” he said.
Keywords: Former CM Siddaramaiah/ Former Minister A. Manju/ no entry to Congress