ಮೈಸೂರು,ಡಿ,14,2019(www.justkannada.in): ಹುಣಸೂರು ಉಪಚುನಾವಣೆ ಮತದಾನದ ವೇಳೆ ನಡೆದ ಗಲಾಟೆ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಬಿ.ಜೆ.ವಿಜಯ್ ಕುಮಾರ್ ಹಾಗೂ ಶಾಸಕ ಅನಿಲ್ ಚಿಕ್ಕಮಾದು ಮೇಲೆ ದಾಖಲಿಸಿರುವ ಮೊಕದ್ದಮೆ ಹಿಂಪಡೆಯುವಂತೆ ಒತ್ತಾಯಿಸಿ ಕಾಂಗ್ರೆಸ್ ಮುಖಂಡರು ಇಂದು ಪ್ರತಿಭಟನೆ ನಡೆಸಿದರು.
ಮೈಸೂರು ಜಿಲ್ಲಾ ಮತ್ತು ನಗರ ಕಾಂಗ್ರೆಸ್ ವತಿಯಿಂದ ಕಾಂಗ್ರೆಸ್ ಕಾರ್ಯಕರ್ತರು ಮೈಸೂರಿನ ಗಾಂಧಿ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದರು. ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಕಾಂಗ್ರೆಸ್ ಕಾರ್ಯಕರ್ತರು ಕಿಡಿಕಾರಿದರು.
ಪ್ರತಿಭಟನೆ ವೇಳೆ ಮಾತನಾಡಿದ ಕಾಂಗ್ರೆಸ್ ನಗರಾಧ್ಯಕ್ಷ ಆರ್.ಮೂರ್ತಿ , ಬಿಜೆಪಿ ಕಾಂಗ್ರೆಸ್ ನಾಯಕರನ್ನ ಕುಗ್ಗಿಸುವ ಹುನ್ನಾರ ನಡೆಸುತ್ತಿದೆ. ಸುಳ್ಳು ಆರೋಪ ಮಾಡಿ ನಮ್ಮ ನಾಯಕರ ಮೇಲೆ ಎಫ್ಐರ್ ದಾಖಲು ಮಾಡಲಾಗಿದೆ. ಕೂಡಲೇ ಮೊಕದ್ದಮೆಯನ್ನು ಹಿಂಪಡೆಯಬೇಕೆಂದು ಒತ್ತಾಯಯಿಸಿದರು. ಪ್ರತಿಭಟನೆಯಲ್ಲಿ ಮಾಜಿ ಶಾಸಕರಾದ ಕಳಲೆ ಕೇಶವಮೂರ್ತಿ, ಎಂ.ಕೆ.ಸೋಮಶೇಖರ್ ಸೇರಿ ಇನ್ನಿತರ ಕಾಂಗ್ರೆಸ್ ಮುಖಂಡರು, ನೂರಾರು ಕಾರ್ಯಕರ್ತರು ಭಾಗಿಯಾಗಿದ್ದರು.
ಹುಣಸೂರು ಚುನಾವಣಾ ಮತದಾನದ ಸಂಧರ್ಭದಲ್ಲಿ ಪೊಲೀಸರು ಮತ್ತು ಶಾಸಕ ಅಮಿಲ್ ಚಿಕ್ಕಮಾದು ಸೇರಿ ಕಾಂಗ್ರೆಸ್ ಮುಖಂಡರ ನಡುವೆ ವಾಗ್ವಾದ ನಡೆದಿತ್ತು. ಪ್ರಕರಣದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ವಿಜಯ್ ಕುಮಾರ್ ಹಾಗೂ ಶಾಸಕ ಅನಿಲ್ ಚಿಕ್ಕಮಾದು ಮೇಲೆ ಎಫ್ ಐ ರ್ ದಾಖಲಾಗಿತ್ತು.
Key words: mysore-congress –protest- withdraw-case-MLA- anil chikkamadu