ಮೈಸೂರು,ಜು,22,2020(www.justkannada.in): ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು ದಿನೇ ದಿನೇ ಸೋಂಕಿತರ ಪ್ರಮಾಣ ಹೆಚ್ಚುತ್ತಿದೆ. ಈ ಹಿನ್ನೆಲೆ ಪ್ರತಿ ಶ್ರಾವಣ ಶನಿವಾರಗಳಂದು ನಗರದ ಲಕ್ಷ್ಮಿ ವೆಂಕಟೇಶ್ವರ ದೇವಾಲಯಕ್ಕೆ ಸಾರ್ವಜನಿಕರಿಗೆ ಪ್ರವೇಶಕ್ಕೆ ನಿರ್ಬಂಧಿಸಲಾಗಿದೆ.
ಮೈಸೂರಿನ ಒಂಟಿಕೊಪ್ಪಲಿನಲ್ಲಿರುವ ಪ್ರತಿಷ್ಠಿತ ಲಕ್ಷ್ಮಿವೆಂಕಟೇಶ್ವರ ದೇವಾಲಯಕ್ಕೆ ಶ್ರಾವಣ ಶನಿವಾರಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ. ಹೀಗಾಗಿ ದೇವಾಲಯಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಿ ಪೋಲಿಸ್ ಆಯುಕ್ತ ಚಂದ್ರಗುಪ್ತ ಆದೇಶ ಹೊರಡಿಸಿದ್ದಾರೆ. ಜುಲೈ 26ರಿಂದ ರಿಂದ ಆಗಸ್ಟ್ 15 ರವರೆಗಿನ ಎಲ್ಲಾ ಶನಿವಾರಗಳಂದು ದೇವಾಲಯದಲ್ಲಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ಇಲ್ಲ.
ಎಲ್ಲಾ ಶ್ರಾವಣ ಶನಿವಾರದ ಹಿಂದಿನ ದಿನ ಶುಕ್ರವಾರ ಸಂಜೆ 5 ಗಂಟೆಯಿಂದಲೇ ಸಾರ್ವಜನಿಕ ದರ್ಶನಕ್ಕೆ ನಿರ್ಬಂಧ ವಿಧಿಸಲಾಗಿದ್ದು, ದೇವಾಲಯದ ಸಮಿತಿ ಎಂದಿನಂತೆ ಪೂಜಾಕೈಂಕರ್ಯಕ್ಕೆ ಮಾತ್ರ ಅವಕಾಶ ನೀಡಲಾಗಿದೆ.
Key words: mysore- corona- lakshmi venkateshwara temple- Restriction – public.