ಮೈಸೂರು, ಮೇ 23, 2021 : (www.justkannada.in news ) ಕೊರೋನಾ ಎರಡನೇ ಅಲೆಯ ನಂತರ ಬರಲಿದೆ ಎನ್ನಲಾದ ಸಂಭವನೀಯ ಮೂರನೇ ಅಲೆಯನ್ನು ನಿಭಾಯಿಸಲು ಹಾಗೂ ಮುಂಜಾಗೃತವಾಗಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲು ಭಾನುವಾರ ಪ್ರಕಟಿಸಿದ ಸಮಿತಿಯಲ್ಲಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರನ್ನು ಕೈಬಿಡಲಾಗಿದೆ.
ಮೈಸೂರು ಸಂಸದ ಪ್ರತಾಪ್ ಸಿಂಹ ನೇತೃತ್ವದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸೋಮಶೇಖರ್, ಈ ಜಿಲ್ಲಾ ಮಟ್ಟದ ಸಮಿತಿ ರಚಿಸಿ ಪ್ರಕಟಣೆ ನೀಡಿದ್ದಾರೆ. ಆದರೆ ಈ ಸಮಿತಿಯಲ್ಲಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರನ್ನು ಕೈಬಿಟ್ಟಿರುವುದು ಗಮನಾರ್ಹ. ನಿನ್ನೆಯಷ್ಟೆ ಸಂಸದ ಪ್ರತಾಪಸಿಂಹ, ಜಿಲ್ಲಾಧಿಕಾರಿ ಕಾರ್ಯವೈಖರಿ ಬಗ್ಗೆ ಅಸಮಧಾನ ವ್ಯಕ್ತಪಡಿಸಿ ಹೇಳಿಕೆ ನೀಡಿದ್ದರು. ಬಳಿಕ ಸಂಸದರ ಈ ಹೇಳಿಕೆಯನ್ನು ಉಸ್ತುವಾರಿ ಸಚಿವ ಸೋಮಶೇಖರ್ ಸಮರ್ಥಿಸಿಕೊಂಡಿದ್ದರು. ಇದೀಗ, ಕರೋನಾ 3 ನೇ ಅಲೆ ನಿಭಾಯಿಸಲು ಭಾನುವಾರ ರಚಿಸಲಾಗಿರುವ ಸಮಿತಿಯಲ್ಲಿ ಜಿಲ್ಲಾಧಿಕಾರಿಗೆ ಕೊಕ್ ನೀಡಲಾಗಿದೆ.
ಈ ಸಮಿತಿಯಲ್ಲಿ ಮೈಸೂರು ನಗರ ಪಾಲಿಕೆಯ ಆಯುಕ್ತೆ ಶಿಲ್ಪನಾಗ್, ಚಲುವಾಂಬ ಮಕ್ಕಳ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾದ ಡಾ. ಸುಧಾ, ವೆಂಟಿಲೇಟರ್ ತಯಾರಿಸುವ ಸ್ಕ್ಯಾನ್ರೇ ಕಂಪನಿಯ ಮುಖ್ಯಸ್ಥ ವಿಶ್ವಪ್ರಸಾದ್ ಆಳ್ವಾ, ಹಾಗೂ ಮಕ್ಕಳ ತಜ್ಞ ವೈದ್ಯರು ಇದ್ದಾರೆ.
key words : mysore-corona-task.force-dc-rohini-sindhoori-name-dropped