ಮೈಸೂರು, ಜು.09, 2021 : (www.justkannada.in news ) ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದಿಂದ ಆಗಸ್ಟ್.14ರಂದು ಲೋಕ್ ಅದಾಲತ್.
ಜಿಲ್ಲೆಯ ಎಲ್ಲಾ ನ್ಯಾಯಲಯದ ಬಾಕಿ ಉಳಿದ ಪ್ರಕರಣಗಳ ಇತ್ಯರ್ಥ. ಬಾಕಿ ಇರುವ ಪ್ರಕರಣಗಳಲ್ಲಿ ರಾಜಿಯಾಗಬಹುದಾದ ಪ್ರಕರಣಗಳು ಮತ್ತು ವ್ಯಾಜ್ಯ ಪೂರ್ವ ಪ್ರಕರಣಗಳ ರಾಜಿ ಸಂಧಾನ. ಸುದ್ದಿಗೋಷ್ಠಿಯಲ್ಲಿ ಮೈಸೂರು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎಂ.ಎಲ್.ರಘುನಾಥ್ ಮಾಹಿತಿ.
ಮೈಸೂರು ನಗರ ಮತ್ತು ತಾಲೂಕುಗಳಲ್ಲಿನ ಒಟ್ಟು 1,07,172 ಪ್ರಕರಣ ಬಾಕಿ ಇದೆ. ಅವುಗಳ ಪೈಕಿ 81328 ಪ್ರಕರಣ ರಾಜಿಯಾಗಬಹುದೆಂದು ಅಂದಾಜಿಸಲಾಗಿದೆ. ಮೋಟಾರ್ ವಾಹನಗಳ ಅಪಘಾತ ಪ್ರಕರಣ, ಕೌಟುಂಬಿಕ ಕಲಹ ಪ್ರಕರಣಗಳಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ . ಸಾರ್ವಜನಿಕರು ಲೋಕ ಅದಾಲತ್ ಸದುಪಯೋಗ ಪಡಿಸಿಕೊಳ್ಳುವಂತೆ ಮನವಿ.
ಕಾನೂನು ಸೇವಾ ಸಮಿತಿಗಳನ್ನು ಸಂಪರ್ಕಿಸಿ ಅರ್ಜಿ ಸಲಿಸಿದಂತಹ ಪ್ರಕರಣಗಳ ರಾಜಿ ಸಂಧಾನಕ್ಕಾಗಿ ಕ್ರಮ. ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಮತ್ತು ಸತ್ರನ್ಯಾಯಾಧೀಶರಾದ ಎಂ.ಎಲ್.ರಘುನಾಥ್ ಮಾಹಿತಿ.
—-
key words: mysore-court-adalath-disitrict-judge