ಮೈಸೂರು ನ್ಯಾಯಾಲಯದ ಜಿಲ್ಲಾ ಸರ್ಕಾರಿ ವಕೀಲರ ಹುದ್ದೆಗೆ ಎ೦. ಮಹಾದೇವಸ್ವಾಮಿ ನೇಮಕ

ಮೈಸೂರು,ಜುಲೈ,2,2024 (www.justkannada.in): ಮೈಸೂರು ಜಿಲ್ಲೆಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಅಧಿಸೂಚನೆ ಜಿಲ್ಲಾ ಸರ್ಕಾರಿ ವಕೀಲರ ಹುದ್ದೆಗೆ ಎ೦. ಮಹಾದೇವಸ್ವಾಮಿ ಅವರನ್ನ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಈ ಕುರಿತು ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆ (ಆಡಳಿತ-2) ಸರ್ಕಾರದ ಅಧೀನ ಕಾರ್ಯದರ್ಶಿ ಆದಿ ನಾರಾಯಣ ಅವರು ಆದೇಶ ಹೊರಡಿಸಿದ್ದಾರೆ.

ಮೈಸೂರು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಜಿಲ್ಲಾ ವಕೀಲರಾಗಿದ್ದ ಉಮೇಶ್‌ ಕುಮಾರ್‌ ಬಿನ್‌ ಸಣ್ಣ ಸೋಮಚಾರ್‌ ಇವರನ್ನು ಕರ್ನಾಟಕ ಕಾನೂನು ಅಧಿಕಾರಿಗಳ (ನೇಮಕಾತಿ ಮತ್ತು ಸೇವಾ ಷರತ್ತುಗಳು) ನಿಯಮಗಳು, 1977ರ ನಿಯಮ 5 (6)ರ ಪ್ರದತ್ತವಾದ ಅಧಿಕಾರದನ್ವಯ ಜಿಲ್ಲಾ ವಕೀಲರ ಹುದ್ದೆಯ ಕರ್ತವ್ಯದಿಂದ ಬಿಡುಗಡೆ ಮಾಡಲಾಗಿದೆ ಹಾಗೂ ಸದರಿಯವರಿಗೆ ಒಂದು ತಿಂಗಳ ನೋಟೀಸ್‌ ನ ಬದಲು ಒಂದು ತಿ೦ಗಳ ರಿಟೇನರ್‌ ಫೀ ಮ೦ಜೂರು ಮಾಡಲಾಗಿದೆ.

ಎ೦. ಮಹಾದೇವಸ್ವಾಮಿ, ವಕೀಲರು, ನ೦. 2379/1, 1ನೇ ಮಹಡಿ, ಹೊಸ ಕಾ೦ತರಾಜ ಅರಸು ರಸ್ತೆ, ಕೆ.ಜಿ. ಕೊಪ್ಪಲು, ಮೈಸೂರು-570009 ಇವರನ್ನು ಮೈಸೂರು ಜಿಲ್ಲೆಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಜಿಲ್ಲಾ ಸರ್ಕಾರಿ ವಕೀಲರ ಹುದ್ದೆಗೆ’ ಕರ್ನಾಟಕ ಕಾನೂನು ಅಧಿಕಾರಿಗಳ (ನೇಮಕಾತಿ ಮತ್ತು ಸೇವಾ ಷರತ್ತುಗಳು) ನಿಯಮಗಳು, 1977ರ ನಿಯಮ 26(3)ರನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಹುದ್ದೆಯ ಪ್ರಭಾರವನ್ನು ವಹಿಸಿಕೊಳ್ಳುವ ದಿನಾ೦ಕದಿ೦ದ ಜಾರಿಗೆ ಬರುವಂತೆ ಒಂದು ವರ್ಷದ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ ಇವೆರಡರಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ನೇಮಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

Key words: Mysore Court, Advocate, Appointment, Mahadevaswamy