ಮೈಸೂರು, ಡಿಸೆಂಬರ್ 17, 2021 (www.justkannada.in news ): ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ರಾಷ್ಟ್ರೀಯ ಲೋಕ್ ಅದಾಲತ್ ಕಾರ್ಯಕ್ರಮ ನಾಳೆ ( ಡಿಸೆಂಬರ್ 18) ಮೈಸೂರಿನ ಜಿಲ್ಲಾದ್ಯಂತ ಹಮ್ಮಿಕೊಳ್ಳಲಾಗಿದೆ.
ಲೋಕ್ ಅದಾಲತ್‍ನಲ್ಲಿ ಸಾರ್ವಜನಿಕರು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಮೈಸೂರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವನ್ನು ಅಥವಾ ಆಯಾ ತಾಲ್ಲೂಕು ಕಾನೂನು ಸೇವೆಗಳ ಸಮಿತಿಗಳನ್ನು ಮತ್ತು ಖಾಯಂ ಜನತಾ ನ್ಯಾಯಾಲಯವನ್ನು ಆನ್‍ಲೈನ್, ವೀಡಿಯೋ ಹಾಗೂ ಕಾನ್ಛರೆನ್ಸ್ ಈ-ಮೇಲ್, ಎಸ್.ಎಮ್.ಎಸ್., ವಾಟ್ಸ್ ಆಪ್, ಎಲೆಕ್ಟ್ರಾನಿಕ್ ಮೋಡ್ ಖುದ್ದಾಗಿ ಹಾಜರಾಗುವ ಮೂಲಕ ಸಂಪರ್ಕಿಸಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಕೋರಿದೆ.
ಹೆಚ್ಚಿನ ಮಾಹಿತಿಗಾಗಿ ಮೈಸೂರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಎ.ಡಿ.ಆರ್. ಸೆಂಟರ್, ಮಳಲವಾಡಿ, ಜಯನಗರ, 5ನೇ ಕ್ರಾಸ್, ಮೈಸೂರು-14 ದೂರವಾಣಿ ಸಂಖ್ಯೆ: 0821 2330130, ID: mysurudlsa@gmail.com ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ತಾಲ್ಲೂಕು ಕಾನೂನು ಸೇವೆಗಳ ಸಮಿತಿಗಳ ಸದಸ್ಯ ಕಾರ್ಯದರ್ಶಿ ಅವರನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ದೇವರಾಜ ಭೂತೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
key words : Mysore-court-lokadalat-district-court