ಮೈಸೂರು,ಸೆಪ್ಟಂಬರ್,27,2020(www.justkannada.in): ಕೊರೋನಾ ಹಿನ್ನೆಲೆ ಈ ಬಾರಿ ವಿಶ್ವ ವಿಖ್ಯಾತ ಮೈಸೂರು ದಸರಾವನ್ನು ಸರಳ ಮತ್ತು ಸಾಂಪ್ರದಾಯಕವಾಗಿ ಆಚರಿಸಲು ನಿರ್ಧರಿಸಿದ್ದು ಈ ನಡುವೆ ಜಂಬೂ ಸವಾರಿಗೆ 2 ಸಾವಿರ ಜನ ಸೇರಿಸಲು ಚಿಂತನೆ ನಡೆಸಲಾಗಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ತಿಳಿಸಿದ್ದಾರೆ.
ಮೈಸೂರಿನಲ್ಲಿ ಈ ಬಗ್ಗೆ ಮಾತನಾಡಿದ ಸಚಿವ ಎಸ್.ಟಿ ಸೋಮಶೇಖರ್, ಕೊರೋನಾ ಕಾರಣದಿಂದಾಗಿ ಸರಳ ದಸರಾ ಆಚರಣೆ ಮಾಡಲು ನಿರ್ಧರಿಸಿದ್ದೇವೆ. ಹೀಗಾಗಿ ಚಾಮುಂಡಿ ಬೆಟ್ಟದಲ್ಲಿ ನಡೆಯುವ ಉದ್ಘಾಟನಾ ಕಾರ್ಯಕ್ರಮಕ್ಕೆ 250, ಅರಮನೆ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ 1ಸಾವಿರ ಮಂದಿ, ಜಂಬೂಸವಾರಿಗೆ 2ಸಾವಿರ ಜನ ಸೇರಿಸಲು ಚಿಂತನೆ ನಡೆಸಿದ್ದೇವೆ ಎಂದು ತಿಳಿಸಿದ್ದಾರೆ.
ಕೇಂದ್ರ ಸರ್ಕಾರದ ಮಾರ್ಗಸೂಚಿ ಕೈ ಸೇರಿದ ನಂತರ ಈ ಬಗ್ಗೆ ಸ್ಪಷ್ಟ ತೀರ್ಮಾನ ಆಗಲಿದೆ. ಜಂಬೂ ಸವಾರಿಗೆ ಭಾಗವಹಿಸುವ ಕಲಾವಿದರಿಗೂ ಕೋವಿಡ್ ಟೆಸ್ಟ್ ಮಾಡಲಾಗುವುದು ಐದು ದಿನ ಮುಂಚಿತವಾಗಿ ಟೆಸ್ಟ್ ಮಾಡಿಸಿಕೊಂಡ ಕಲಾವಿದರಿಗೆ ಮಾತ್ರ ಅವಕಾಶ ನೀಡಲಾಗುವುದು ಎಂದು ಸಚಿವ ಎಸ್.ಟಿ ಸೋಮಶೇಖರ್ ತಿಳಿಸಿದರು.
ದಸರಾ ಪರಂಪರೆಯಾಗಿ ಮುಂದುರೆಸಿಕೊಂಡು ಬಂದಿದೆ. ಹೀಗಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಬೇಕಾಗುತ್ತೆ. ಈ ವಿಚಾರದಲ್ಲಿ ಯಾವುದೇ ರೀತಿಯ ಗೊಂದಲ ಇಲ್ಲ ಎಂದು ಸಚಿವ ಎಸ್.ಟಿ ಸೋಮಶೇಖರ್ ಸ್ಪಷ್ಟನೆ ನೀಡಿದರು.
Key words: Mysore Dasara -2020-jamboo ride-two thousand- people -allowed