ಮೈಸೂರು ದಸರಾ 2023: ನವರಾತ್ರಿ ಆಚರಣೆಯ ವೇಳಾಪಟ್ಟಿ ಬಿಡುಗಡೆ: ಅ.15 ರಂದು ದಸರಾಗೆ ಚಾಲನೆ .

ಮೈಸೂರು,ಸೆಪ್ಟಂಬರ್,15,2023(www.justkannada.in):  ಈ ಬಾರಿ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನ ಅದ‍್ಧೂರಿಯಾಗಿ ಆಚರಿಸಲು ಸರ್ಕಾರ ನಿರ್ಧರಿಸಿದ್ದು ಸಾಂಸ್ಕೃತಿಕ ನಗರಿ ಮೈಸೂರು ಸಜ್ಜಾಗಿದೆ.  ಈಗಾಗಲೇ ದಸರಾ ಗಜಪಡೆ ಮೈಸೂರು ಅರಮನೆ ಆವರಣಕ್ಕೆ ಆಗಮಿಸಿ ಬೀಡುಬಿಟ್ಟಿದ್ದು ತಾಲೀಮು ಶುರುವಾಗಿದೆ. ಈ ನಡುವೆ ಇದೀಗ  ನವರಾತ್ರಿ ಆಚರಣೆಯ ವೇಳಾಪಟ್ಟಿ ಬಿಡುಗಡೆ ಮಾಡಲಾಗಿದೆ.

ವೇಳಾಪಟ್ಟಿ ಪ್ರಕಾರ  15-10-2023 ಭಾನುವಾರ ಶರನ್ನವರಾತ್ರಿ ಪ್ರಾರಂಭವಾಗಲಿದ್ದು, ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ಪೂಜೆ ನಡಯಲಿದೆ.  ಬೆಳಿಗ್ಗೆ 10.15 ರಿಂದ 10.36 ಶುಭ ವೃಶ್ಚಿಕ ಲಗ್ನದಲ್ಲಿ ಪೂಜೆ ನಡೆಯಲಿದ್ದು ಮೈಸೂರು ದಸರಾಗೆ ಚಾಲನೆ ಸಿಗಲಿದೆ.  ನಂತರ ಒಂಬತ್ತು ದಿನಗಳ ಕಾಲ ಅರಮನೆಯಲ್ಲಿ ವಿವಿಧ ಪೂಜಾ ಕೈಂಕರ್ಯಗಳು ನಡೆಯಲಿದೆ. ಅಕ್ಟೋಬರ್ 23 ರಂದು ಮೈಸೂರು ಅರಮನೆಯಲ್ಲಿ ಆಯುಧ ಪೂಜೆ ನಡೆಯಲಿದೆ.

ಅಕ್ಟೋಬರ್ 25 ವಿಜಯದಶಮಿಯಂದು ಮಧ್ಯಾಹ್ನ 1.46 ರಿಂದ 2:08 ಮಕರ ಲಗ್ನದಲ್ಲಿ ಮುಖ್ಯಮಂತ್ರಿಯವರು ನಂದೀ ಧ್ವಜ ಪೂಜೆ ನೆರವೇರಿಸಲಿದ್ದಾರೆ. ಬಳಿಕ ಮಧ್ಯಾಹ್ನ 4.40 ರಿಂದ 5.00ರ ಶುಭ ಮೀನ ಲಗ್ನದಲ್ಲಿ ಮುಖ್ಯಮಂತ್ರಿಗಳು ಮತ್ತು ಗಣ್ಯಾತಿಗಣ್ಯರಿಂದ ತಾಯಿ ಚಾಮುಂಡೇಶ್ವರಿಗೆ   ಪುಷ್ಪಾರ್ಚನೆ ಮಾಡುವ ಮೂಲಕ ವಿಶ್ವ ವಿಖ್ಯಾತ ಮೈಸೂರು ದಸರಾ ಜಂಬೂಸವಾರಿ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ.

ಮೈಸೂರು ದಸರಾ-2023ರ ವೇಳಾಪಟ್ಟಿ ಹೀಗಿದೆ ನೋಡಿ..

15-10-2023 ಭಾನುವಾರ ಶರನ್ನವರಾತ್ರಿ ಪ್ರಾರಂಭ.

ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ಪೂಜೆ.

(ಬೆಳಿಗ್ಗೆ 10.15 ರಿಂದ 10.36 ಶುಭ ವೃಶ್ಚಿಕ ಲಗ್ನದಲ್ಲಿ ಚಾಲನೆ)

ಅರಮನೆ ಪೂಜೆಗಳು: 15-10-2023 ಸಾಯಂಕಾಲ 6.30 ರಿಂದ 7.15ಶುಭಮೇಷ ಲಗ್ನದಲ್ಲಿ ಆರಂಭ.

20-10-2023 ಶುಕ್ರವಾರ :  ಕಾತ್ಯಾಯಿನೀ – ಸರಸ್ವತಿ ಪೂಜೆ (ಮೂಲ ನಕ್ಷತ್ರದಲ್ಲಿ ಸರಸ್ವತಿ ಪೂಜೆ ಪ್ರಾರಂಭ ಮಾಡಿ ಶ್ರವಣ ನಕ್ಷತ್ರದ ದಿನ ಅಂದರೆ 24-10-2023 ರ ಮಂಗಳವಾರ ವಿಸರ್ಜನೆ)

21-10-2023 ಶನಿವಾರ : ಕಾಳರಾತ್ರಿ, ಮಹಿಷಾಸುರ ಸಂಹಾರ.

23-10-2023 ಸೋಮವಾರ : ಆಯುಧ ಪೂಜೆ.

24-10-2023 ಮಂಗಳವಾರ : ವಿಜಯದಶಮಿ.

ಮಧ್ಯಾಹ್ನ 1.46 ರಿಂದ 2:08 ಮಕರ ಲಗ್ನದಲ್ಲಿ ಮುಖ್ಯಮಂತ್ರಿಯವರಿಂದ ನಂದೀ ಧ್ವಜ ಪೂಜೆ.

ಮಧ್ಯಾಹ್ನ 4.40 ರಿಂದ 5.00ರ ಶುಭ ಮೀನ ಲಗ್ನದಲ್ಲಿ ಮಾನ್ಯ ಮುಖ್ಯಮಂತ್ರಿಯವರಿಂದ ಮತ್ತು ಗಣ್ಯಾತಿಗಣ್ಯರಿಂದ ಪುಷ್ಪಾರ್ಚನೆ. ನಂತರ “ಜಂಬೂ ಸವಾರಿ” ಪ್ರಾರಂಭ.

26-10-2023 ಭಾನುವಾರ : ಚಾಮುಂಡಿ ಬೆಟ್ಟದ ಶ್ರೀಚಾಮುಂಡೇಶ್ವರಿ ರಥೋತ್ಸವ.

Key words: Mysore Dasara 2023- Navaratri Celebration -Schedule -Released