ಮೈಸೂರು,ಅಕ್ಟೋಬರ್10,2020(www.justkannada.in): ವಿಶ್ವ ವಿಖ್ಯಾತ ಮೈಸೂರು ದಸರಾಗೆ ದಿನಗಣನೆ ಆರಂಭವಾಗಿದ್ದು ಈ ಬಾರಿ ಸರಳ ಮತ್ತು ಸಾಂಪ್ರದಾಯಿಕ ದಸರಾ ಆಚರಣೆಗೆ ಸರ್ಕಾರ ಮುಂದಾಗಿದೆ. ಮೈಸೂರು ದಸರಾ ಅಂಗವಾಗಿ 8 ದಿನಗಳ ಕಾಲ ಸಾಂಸ್ಕೃತಿಕ ಕಾರ್ಯಕ್ರಮಗಳು ಅರಮನೆ ಆವರಣದಲ್ಲಿ ಜರುಗಲಿವೆ.
ದಸರಾ ಆಚರಣೆ ಪೂರ್ವಸಿದ್ದತೆ ಹಾಗೂ ಕೋವಿಡ್ ಹರಡುವಿಕೆ ತಡೆಗಟ್ಟುವ ನಿಟ್ಟಿನಲ್ಲಿ ತೆಗೆದುಕೊಂಡಿರುವ ಮುಂಜಾಗ್ರತಾ ಕ್ರಮಗಳ ಪರಿಶೀಲನೆಗಾಗಿ ರಾಜ್ಯ ಮಟ್ಟದ ತಾಂತ್ರಿಕ ಸಲಹಾ ಸಮಿತಿ ತಂಡ ಮೈಸೂರಿಗೆ ಆಗಮಿಸಿತ್ತು. ಇದೀಗ ದಸರಾ ಆಚರಣೆ ಬಗ್ಗೆ ತಾಂತ್ರಿಕ ಸಲಹಾ ಸಮಿತಿ ಶಿಫರಸ್ಸು ಮಾಡಿದೆ.
ದಸರಾ ಹಿನ್ನೆಲೆ ಅಕ್ಟೋಬರ್ 17ರಿಂದ 24 ರವರಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ಕಾರ್ಯಕ್ರಮದಲ್ಲಿ ಸ್ಥಳೀಯ ಕಲಾ ತಂಡಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. 8ದಿನಗಳವರೆಗೆ ಕೇವಲ 2 ಗಂಟೆಗಳ ಕಾಲ ಮಾತ್ರ ಸಾಂಸ್ಕೃತಿಕ ಕಾರ್ಯಕ್ರಮಗಳನ್ನ ನಡೆಸಲು ತಾಂತ್ರಿಕ ಸಲಹಾ ಸಮಿತಿ ಶಿಫಾರಸ್ಸು ಮಾಡಿದೆ.
ಹಾಗೆಯೇ ಕಾರ್ಯಕ್ರಮದಲ್ಲಿ 50 ಕ್ಕೂ ಹೆಚ್ಚು ಜನರು ಸೇರದಿರುವಂತೆ ತಾಂತ್ರಿಕ ಸಲಹಾ ಸಮಿತಿ ಶಿಫಾರಸ್ಸು ಮಾಡಿದೆ.
Key words: Mysore Dasara – 8 Day- Cultural Program- 50 people.