ಮೈಸೂರು,ಅಕ್ಟೋಬರ್,12,2024 (www.justkannada.in): ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ಜಂಬೂ ಸವಾರಿ ಮೆರವಣಿಗೆ ಕೆಲವೇ ಕ್ಷಣಗಳಲ್ಲಿ ಆರಂಭವಾಗಲಿದ್ದು ಈ ನಡುವೆ ಸಿಎಂ ಸಿದ್ದರಾಮಯ್ಯ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದರು.
ಅರಮನೆಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಶುಭ ಮಕರ ಲಗ್ನದಲ್ಲಿ ನಂದಿ ಧ್ವಜಕ್ಕೆ ಪುಷ್ಪಾರ್ಚನೆ ಮಾಡಿ ಪೂಜೆ ಸಲ್ಲಿಸಿದರು. ಈ ವೇಳೆ ಡಿಸಿಎಂ ಡಿಕೆ ಶಿವಕುಮಾರ್, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತಿತರರು ಸಾಥ್ ನೀಡಿದರು.
ನಂದಿ ಧ್ವಜಕ್ಕೆ ಪೂಜೆ ನೆರವೇರಿಸಿದ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ ರಾಜ್ಯದಲ್ಲಿ ಉತ್ತಮ ಮಳೆಬೆಳೆಯಾಗಿದೆ. ರೈತರ ಮೊಗದಲ್ಲಿ ಮಂದಹಾಸ ತುಂಬಿದೆ. ಎಲ್ಲಾ ಜಿಲ್ಲೆಗಳಲ್ಲೂ ಮಳೆ ಚೆನ್ನಾಗಿ ಆಗಿದ್ದು, ಈ ಬಾರಿ ಬರಗಾಲ ಆವರಿಸಿಲ್ಲ. ದುಷ್ಟರ ಶಿಕ್ಷೆ ಶಿಷ್ಟರ ರಕ್ಷಣೆಯಾಗಲಿ. ಇದೊಂದು ಐತಿಹಾಸಿಕ ಕ್ಷಣ ಎಂದು ನುಡಿದರು.
Key words: Mysore Dasara, CM Siddaramaiah, worship, Nandi dwaja