ಮೈಸೂರು, ಆಗಸ್ಟ್ 20,2024 (www.justkannada.in): ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ನಾಳೆ ಕ್ಯಾಪ್ಟನ್ ಅಭಿಮನ್ಯೂ ನೇತೃತ್ವದ ದಸರಾ ಗಜಪಡೆ ಮೈಸೂರಿಗೆ ಆಗಮಿಸಲಿದೆ.
ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ವೀರನಹೊಸಹಳ್ಳಿಯಲ್ಲಿ ಗಜಪಯಣ ಸಮಾರಂಭ ನಡೆಯಲಿದ್ದು, ಮೈಸೂರಿನ ಅರಣ್ಯ ಭವನದ ಆವರಣಕ್ಕೆ ಕ್ಯಾಪ್ಟನ್ ಅಭಿಮನ್ಯು ಹಾಗೂ ತಂಡ ಆಗಮಿಸಲಿದೆ.
ನಾಳೆ ಬೆಳಗ್ಗೆ 10.20ರಿಂದ 10.45ರೊಳಗಿನ ಶುಭ ಮುಹೂರ್ತದಲ್ಲಿ ಗಜಪಡೆಗೆ ಪುಷ್ಪಾರ್ಚನೆ ನಡೆಯಲಿದೆ. ಅರಣ್ಯ ಸಚಿವ ಈಶ್ವರ್ ಖಂಡ್ರೆ, ಜಿಲ್ಲಾ ಉಸ್ತುವಾರಿ ಸಚಿವ ಡಾ. ಮಹದೇವಪ್ಪ, ಸ್ಥಳೀಯ ಶಾಸಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಮೊದಲ ಹಂತದಲ್ಲಿ ಕ್ಯಾಪ್ಟನ್ ಅಭಿಮನ್ಯು ನೇತೃತ್ವದಲ್ಲಿ 9 ಆನೆಗಳು ಮೈಸೂರಿಗೆ ಆಗಮಿಸಲಿದ್ದು, ನಂತರ ಎರಡನೇ ಹಂತದಲ್ಲಿ 5 ಆನೆಗಳು ಮೈಸೂರಿಗೆ ಬರಲಿವೆ.ಆನೆಗಳು, ಮಾವುತರ ವಾಸ್ತವ್ಯಕ್ಕಾಗಿ ಅರಮನೆ ಆವರಣದಲ್ಲಿ ವ್ಯವಸ್ಥೆ ಮಾಡಲಾಗಿದೆ. ಈ ಬಾರಿ ಅದ್ಧೂರಿಯಾಗಿ ದಸರಾ ಆಚರಣೆಗೆ ಸರ್ಕಾರ ನಿರ್ಧರಿಸಿದೆ.
Key words: mysore dasara, Gajapade, arrive, tomorrow