ಬೆಂಗಳೂರು,ಸೆಪ್ಟಂಬರ್,8,2020(www.justkannada.in): ರಾಜ್ಯದಲ್ಲಿ ಕೊರೋನಾ ಮಹಾಮಾರಿ ಹರಡುತ್ತಿರುವ ಹಿನ್ನೆಲೆ ಈ ಬಾರಿ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಚಾಮುಂಡಿ ಬೆಟ್ಟ, ಅರಮನೆಗೆ ಮಾತ್ರ ಸೀಮಿತವಾಗಿ ಆಚರಿಸಲು ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.
ದಸರಾ ಆಚರಣೆ ಕುರಿತು ಇಂದು ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿ ಸಭೆ ನಡೆಯಿತು. ಚಾಮುಂಡಿ ಬೆಟ್ಟ, ಅರಮನೆಗೆ ಮಾತ್ರ ಈ ಬಾರಿ ದಸರಾ ಸೀಮಿತಿವಾಗಿರಬೇಕು. ಅರಮನೆಯಲ್ಲಿ ಸಂಪ್ರದಾಯದ ಕಾರ್ಯಕ್ರಮಗಳು ಇರುತ್ತೆ. ಯುವ ದಸರಾ, ವಸ್ತು ಪ್ರದರ್ಶನ, ಫಲ ಪುಷ್ಪ ಪ್ರದರ್ಶನ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಸದೇ ಇರಲು ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ.
ಹಾಗಯೇ ಈ ಬಾರಿ ಅರಮನೆ ಒಳಗೆ ಮಾತ್ರ ಜಂಬೂ ಸವಾರಿ ನಡೆಸಲು ತೀರ್ಮಾನಿಸಲಾಗಿದ್ದು, ದಸರಾಗೆ ಪ್ರಾರಂಭಿಕವಾಗಿ 10 ಕೋಟಿ ಬಿಡುಗಡೆಗೆ ನಿರ್ಧಾರ ಮಾಡಲಾಗಿದೆ. ಈ ಬಾರಿ ಕೊರೊನಾ ವಾರಿಯರ್ಸ್ ಗಳಿಂದ ದಸರಾ ಉದ್ಘಾಟನೆ ಮಾಡಿಸುವ ಸಾಧ್ಯತೆ ಇದೆ. ಇನ್ನು ಮೈಸೂರು ದಸರಾದಲ್ಲಿ ಚೀನಿ ವಸ್ತುಗಳಿಗೆ ಸಂಪೂರ್ಣ ನಿಷೇಧ ವಿಧಿಸಲು ತೀರ್ಮಾನಿಸಲಾಗಿದೆ.
ಹಾಗೆಯೇ ಈ ಬಾರಿ ದಸರಾಗೆ ಆನೆಗಳ ಸಂಖ್ಯೆಯಲ್ಲಿ ಇಳಿಕೆ ಮಾಡಲು ಸಮಿತಿಯಲ್ಲಿ ಚರ್ಚೆ ಮಾಡಲಾಗಿದೆ. ದಸರಾ ಮಹೋತ್ಸವಕ್ಕೆ 10ಕ್ಕೂ ಹೆಚ್ಚು ಆನೆಗಳು ಭಾಗಿಯಾಗುತ್ತಿದ್ದವು. ಈ ಬಾರಿ ಕೊರೋನಾ ಹಿನ್ನೆಲೆ ಆನೆಗಳ ಸಂಖ್ಯೆ ಕಡಿಮೆ ಮಾಡಲು ಚರ್ಚೆ ನಡೆಸಲಾಗಿದೆ.
Key words: mysore –dasara-high –power –meeting- Palace-many decisions.