ಮೈಸೂರು,ಅಕ್ಟೋಬರ್,17,2020(www.justkannada.in): ನಾಡಹಬ್ಬ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2020 ಕ್ಕೆ ಇಂದು ಜಯದೇವ ಸಂಸ್ಥೆಯ ನಿರ್ದೇಶಕ ಪ ಡಾ.ಸಿ.ಎನ್. ಮಂಜುನಾಥ್ ಅವರು ವಿಧ್ಯುಕ್ತವಾಗಿ ಚಾಲನೆ ನೀಡಿದರು.
ಕೊರೋನಾ ಹಿನ್ನೆಲೆ ಈ ಬಾರಿ ಸರಳ ಮತ್ತು ಸಾಂಪ್ರದಾಯಿಕವಾಗಿ ಮೈಸೂರು ದಸರಾ ಮಹೋತ್ಸವವನ್ನು ಆಚರಿಸಲು ನಿರ್ಧರಿಸಲಾಗಿದ್ದು, ಇಂದು ಬೆಳಗ್ಗೆ 7.45 ರ ಶುಭ ಮುಹೂರ್ತದಲ್ಲಿ ಚಾಮುಂಡಿ ಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಿ ಸನ್ನಿಧಿಯಲ್ಲಿ ಜಯದೇವ ಸಂಸ್ಥೆಯ ನಿರ್ದೇಶಕರಾದ ಡಾ.ಸಿ.ಎನ್ .ಮಂಜುನಾಥ್ ಉದ್ಘಾಟಿಸಿದರು.
ಈ ವೇಳೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬಿ.ಎಸ್.ಯಡಿಯೂರಪ್ಪ, ಸಚಿವರಾದ ಎಸ್.ಟಿ.ಸೋಮಶೇಖರ್, ಬಿ.ಸಿ.ಪಾಟೀಲ್, ಶಾಸಕರಾದ ಜಿ.ಟಿ.ದೇವೇಗೌಡ, ಎಸ್.ಎ.ರಾಮದಾಸ್, ಹರ್ಷವರ್ಧನ್, ಎಲ್.ನಾಗೇಂದ್ರ, ಶ್ರೀಕಂಠೇಗೌಡ, ಎನ್.ಮಹೇಶ್, ಅಡಗೂರು ಎಚ್.ವಿಶ್ವನಾಥ್, ಸಂಸದ ಪ್ರತಾಪ್ ಸಿಂಹ, ಮೇಯರ್ ತಸ್ನೀಂ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಪರಿಮಳಾ ಶ್ಯಾಂ ಸೇರಿದಂತೆ ಪ್ರಮುಖರು ಭಾಗಿಯಾಗಿದ್ದರು.
ಈ ವೇಳೆ ಆರು ಮಂದಿ ಕೊರೋನಾ ವಾರಿಯರ್ಸ್ ರನ್ನ ಸನ್ಮಾನಿಸಲಾಯಿತು. ವೈದ್ಯಾಧಿಕಾರಿ ಡಾ.ನವೀನ್ ಟಿ.ಆರ್, ಹಿರಿಯ ಶುಶ್ರುಷಾಧಿಕಾರಿ 2. ರುಕ್ಮಿಣಿ, ಪೊಲೀಸ್ ಕಾನ್ ಸ್ಟೇಬಲ್ ಕುಮಾರ್ ಪಿ, ಪೌರಕಾರ್ಮಿಕರಾದ ಮರಗಮ್ಮ, ಆಶಾ ಕಾರ್ಯಕರ್ತೆ ನೂರ್ ಜಾನ್ , ಸಮಾಜ ಸೇವಕರಾದ , ಆಯೂಬ್ ಅಹ್ಮದ್ ಅವರನ್ನ ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.
Key words: Mysore Dasara – inaugurated –CN Manjunath- CM bs yeddyurappa- chamundi hills- Corona Warriors.