ಮೈಸೂರು,ಅಕ್ಟೋಬರ್,12,2024 (www.justkannada.in): ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆಯುತ್ತಿರುವ ಸಾಂಸ್ಕೃತಿಕ ಸುಗ್ಗಿ ದಸರಾ ಮಹೋತ್ಸವದ 9ನೇ ದಿನವಾದ ಇಂದು ಐತಿಹಾಸಿಕ ಜಂಬೂಸವಾರಿ ಮೆರವಣಿಗೆಗೆ ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಸಿಎಂ ಸಿದ್ದರಾಮಯ್ಯ ಈಗಾಗಲೇ ಚಾಲನೆ ನೀಡಿದ್ದಾರೆ.
ಅರಮನೆಯಿಂದ ಜಂಬೂಸವಾರಿ ಮೆರವಣಿಗೆ ಸಾಗುತ್ತಿದ್ದು ಕುಂಬ ಲಗ್ನದಲ್ಲಿ ಸಿಎಂ ಸಿದ್ದರಾಮಯ್ಯ ಜಂಬೂಸವಾರಿಗೆ ಚಾಲನೆ ನೀಡಿದರು.
ಬಳಿಕ ತಾಯಿ ಚಾಮುಂಡೇಶ್ವರಿ ಆಸೀನಳಾಗಿರುವ 750 ಕೆ.ಜಿ ತೂಕದ ಚಿನ್ನದ ಅಂಬಾರಿ ಹೊತ್ತು ಕ್ಯಾ.ಅಭಿಮನ್ಯು ರಾಜಗಾಂಭೀರ್ಯದಿಂದ ಹೆಜ್ಜೆ ಹಾಕುತ್ತಿದ್ದಾನೆ. 5ನೇ ಬಾರಿಗೆ ಅಭಿಮನ್ಯು ಅಂಬಾರಿ ಹೊತ್ತಿದ್ದು, ಇತರೇ ಆನೆಗಳು ಅಭಿಮನ್ಯುವಿಗೆ ಸಾಥ್ ನೀಡಿವೆ. ಕುಮ್ಕಿ ಆನೆಗಳಾಗಿ ಹಿರಣ್ಯ, ಲಕ್ಷ್ಮಿ ನಿಶಾನೆಯಾಗಿ ಧನಂಜಯ, ಸಾಲಾನೆಗಳಾಗಿ ಗೋಪಿ, ಏಕಲವ್ಯ , ಪ್ರಶಾಂತ್, ಮಹೇಂದ್ರ, ಸುಗ್ರೀವ, ಏಕಲವ್ಯ, ಹಾಗೆಯೇ ಕಂಜನ್, ಭೀಮ ಜಂಬೂ ಸವಾರಿ ಮೆರವಣಿಗೆಯಲ್ಲಿ ಪಾಲ್ಗೊಂಡಿವೆ.
Key words: mysore dasara, Jambu savari, Abhimanyu, Ambari