ಯಾದಗಿರಿ, ಅಕ್ಟೋಬರ್,3,2024 (www.justkannada.in): ಚಾಮುಂಡಿ ಬೆಟ್ಟದಲ್ಲಿ ನಡೆದ ಮೈಸೂರು ದಸರಾ ಉದ್ಘಾಟನಾ ಸಮಾರಂಭದಲ್ಲಿ ಸಿಎಂ ರಾಜೀನಾಮೆ ಕೊಡುವ ಅವಶ್ಯಕತೆ ಇಲ್ಲ ಎಂದು ಕಿಡಿಕಾರಿದ್ದ ಜೆಡಿಎಸ್ ಶಾಸಕ ಜಿ.ಟಿ ದೇವೇಗೌಡರ ವಿರುದ್ದ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮಾತನಾಡಿದ ಛಲವಾದಿ ನಾರಾಯಣಸ್ವಾಮಿ, ಸಿಎಂ ಸಿದ್ದರಾಮಯ್ಯ ಮತ್ತು ಶಾಸಕರು ದಸರಾ ಉದ್ಘಾಟನಾ ವೇದಿಕೆಯನ್ನು ರಾಜಕೀಯಕ್ಕೆ ಬಳಸಿಕೊಂಡಿದ್ದಾರೆ. ಇದು ನಾಚಿಕೆಗೇಡಿನ ಸಂಗತಿ. ಕಾರ್ಯಕ್ರಮದಲ್ಲಿ ರಾಜಕೀಯ ವಿಚಾರಗಳು ಪ್ರಸ್ತಾಪ ಆಗಬಾರದಿತ್ತು ಎಂದು ವಾಗ್ದಾಳಿ ನಡೆಸಿದರು.
ಸಿಎಂ ಸಿದ್ದರಾಮಯ್ಯ ಏನೂ ತಪ್ಪು ಮಾಡಿಲ್ಲ ಅಂತಾ ಹೇಳುತ್ತಾರೆ. ಏನು ತಪ್ಪು ಮಾಡಿಲ್ಲ ಅಂತೀರಾ, ರಾಜಕೀಯ ಮಾತಾಡಲು ವೇದಿಕೆನಾ? ಅದು ರಾಜಕಾರಣಿಗಳ ತೆವಲು ತೀರಿಸಿಕೊಳ್ಳುವಂತಹ ವೇದಿಕೆ ಆಗಬಾರದು ಎಂದು ಛಲವಾದಿ ನಾರಾಯಣಸ್ವಾಮಿ ಹರಿಹಾಯ್ದರು.
Key words: mysore Dasara, politics, Chalavadi Narayanaswamy