ಮೈಸೂರು, ಆಗಸ್ಟ್ 30,(www.justkannada.in): ನಾಡಹಬ್ಬ ಮೈಸೂರು ದಸರಾ ಮಹೋತ್ಸವವನ್ನು ಈ ಬಾರಿ ಸಾಂಪ್ರದಾಯಿಕವಾಗಿ, ವೈಭವಯುತವಾಗಿ ಆಚರಿಸಲು ಕಾರ್ಯಕ್ರಮಗಳನ್ನು ರೂಪಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನಡೆದ ದಸರಾ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ನಿರ್ಣಯಿಸಲಾಗಿದೆ.
ಅದರಂತೆ 2022ರ ಸೆಪ್ಟೆಂಬರ್ 26 ರಿಂದ 2022ರ ಅಕ್ಟೋಬರ್ 5 ರವರೆಗೆ ವೈಭವಯುತವಾಗಿ ಕಾರ್ಯಕ್ರಮಗಳನ್ನು ಆಯೋಜಿಸಲು ದಸರಾ ಕಾರ್ಯಕಾರಿ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ನವರಾತ್ರಿಯ ದಿನಗಳಲ್ಲಿ ಆಯೋಜಿಸಲಾಗುವ ಕಾರ್ಯಕ್ರಮಗಳಿಗೆ ಪ್ರಾಯೋಜಕತ್ವ ವಹಿಸಲು ಆಸಕ್ತಿ ಇರುವ ಸಂಘ ಸಂಸ್ಥೆಗಳು, ಕೈಗಾರಿಕೆಗಳು, ಸರ್ಕಾರಿ ಸ್ವಾಮ್ಯದ ಮತ್ತು ಖಾಸಗಿ ಬ್ಯಾಂಕ್ ಗಳು, ಹಾಗೂ ಪ್ರಾಯೋಜಕತ್ವ ವಹಿಸಲು ಆಸಕ್ತಿ ಇರುವ ಇತರೆ ಸಂಸ್ಥೆಗಳ ಸಭೆಯನ್ನು ದಿನಾಂಕ: 01-09-2022 ರಂದು ಮಧ್ಯಾಹ್ನ 12.00 ಗಂಟೆಗೆ ಜಿಲ್ಲಾ ಪಂಚಾಯತ್ ಕಛೇರಿ, ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಪ್ರಾಯೋಜಕತ್ವ ವಹಿಸಲು ಆಸಕ್ತ ಸಂಘ ಸಂಸ್ಥೆ, ಕೈಗಾರಿಕೆ, ಇತರೆ ಸಂಸ್ಥೆಗಳ ಪ್ರತಿನಿಧಿಗಳು ಆಗಮಿಸುವಂತೆ ತಮ್ಮ ಸಲಹೆ, ಸೂಚನೆ ಹಾಗೂ ಪ್ರಾಯೋಜಕತ್ವಕ್ಕೆ ಸಂಬಂಧಿಸಿದಂತೆ ಮಾಹಿತಿ ನೀಡಬೇಕೆಂದು ಜಿಲ್ಲಾಧಿಕಾರಿ ಹಾಗೂ ದಸರಾ ವಿಶೇಷಾಧಿಕಾರಿಗಳಾದ ಡಾ.ಬಗಾದಿ ಗೌತಮ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Key words: Mysore dasara-sponsorship -Meeting –sep 1st.