ಮೈಸೂರು,ಸೆಪ್ಟಂಬರ್,1,2023(www.justkannada.in): ವಿಶ್ವ ವಿಖ್ಯಾತ ಮಯಸೂರು ದಸರಾ ಮಹೋತ್ಸವ ಹಿನ್ನೆಲೆ ಇಂದು ಸಾಂಪ್ರದಾಯಕವಾಗಿ ಗಜಪಯಣಕ್ಕೆ ವಿಧ್ಯುಕ್ತ ಚಾಲನೆ ದೊರೆಯಿತು.
ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್ ಸಿ ಮಹದೇವಪ್ಪ ಮತ್ತು ಅರಣ್ಯ ಸಚಿವ ಈಶ್ವರ್ ಖಂಡ್ರೆ ನೇತೃತ್ವದಲ್ಲಿ ಹುಣಸೂರು ತಾಲೂಕಿನ ವೀರನಹೊಸಳ್ಳಿ ಗಜಪಯಣಕ್ಕೆ ಚಾಲನೆ ನೀಡಲಾಯಿತು.
ಬೆಳಿಗ್ಗೆ 9:45 ರಿಂದ 10:15 ರ ತುಲಾ ಲಗ್ನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮಾಡುವ ಮೂಲಕ ಸಚಿವ ಎಚ್.ಸಿ ಮಹದೇವಪ್ಪ ಚಾಲನೆ ನೀಡಿದರು. ಮೊದಲ ಹಂತದಲ್ಲಿ 9 ಆನೆಗಳು ಆಗಮಿಸಲಿದ್ದು, ಕಬ್ಬು, ಬೆಲ್ಲ, ಫಲತಾಂಬೂಲ ಪೂಜಾ ಸಾಮಗ್ರಿಗಳ ಮೂಲಕ ಪೂಜೆ ಸಲ್ಲಿಕೆ ಮಾಡಲಾಯಿತು.
ಸ್ಥಳೀಯ ಶಾಸಕ ಹರೀಶ್ ಗೌಡ, ಎಂಎಲ್ ಸಿ ಮಂಜೇಗೌಡ ಅರಣ್ಯ ಇಲಾಖೆಯ ಅಧಿಕಾರಿ ವರ್ಗದ ಮತ್ತು ಜಿಲ್ಲಾಧಿಕಾರಿಗಳು ಕಾರ್ಯಕ್ರಮಲ್ಲಿ ಭಾಗಿಯಾಗಿದ್ದರು.
ನಾಗರಹೊಳೆ ಮತ್ತಿಗೋಡು ಆನೆ ಶಿಬಿರದಿಂದ ಅಭಿಮನ್ಯು, ಭೀಮ, ಮಹೇಂದ್ರ ಆಗಮಿಸುತ್ತಿದ್ದರೆ, ನಾಗರಹೊಳೆಯ ಬಳ್ಳೆ ಆನೆ ಶಿಬಿರದಿಂದ ಅರ್ಜುನ ಹಾಗೂ ದುಬಾರೆ ಆನೆ ಶಿಬಿರದಿಂದ ಧನಂಜಯ, ಗೋಪಿ, ವಿಜಯ ಆನೆಯನ್ನು ಅಂತಿಮಗೊಳಿಸಲಾಗಿದೆ. ಇನ್ನು ಬಂಡೀಪುರದ ರಾಮಪುರ ಶಿಬಿರದಿಂದ ಪಾರ್ಥ ಸಾರಥಿ, ಭೀಮನಕಟ್ಟೆ ಆನೆ ಶಿಬಿರದಿಂದ ವರಲಕ್ಷಿ ಆನೆ ಮೊದಲ ಹಂತದಲ್ಲಿ ಆಗಮಿಸಲಿವೆ.
Key words: Mysore Dasara- Traditional -drive – Gajapayana-veeranahosalli