ಮೈಸೂರು,ಸೆಪ್ಟಂಬರ್,11,2020(www.justkannada.in): ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನ ಸರಳ ಮತ್ತು ಸಂಪ್ರದಾಯಕವಾಗಿ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು ಈ ನಡುವೆ ಇಂದು ನಿಗದಿಯಾಗಿದ್ದ ಮೈಸೂರು ದಸರಾ ಕಾರ್ಯಕಾರಿ ಸಮಿತಿ ಸಭೆಯನ್ನು ನಾಳೆಗೆ ಮುಂದೂಡಲಾಗಿದೆ.
ಇಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಮೈಸೂರು ದಸರಾ ಕಾರ್ಯಕಾರಿ ಸಮಿತಿ ಸಭೆ ನಡೆಯಬೇಕಿತ್ತು. ಆದರೆ ಕಾರಣಂತಾರದಿಂದ ಸಭೆಯನ್ನ ನಾಳೆಗೆ ಮೂಂದೂಡಿಕೆ ಮಾಡಲಾಗಿದೆ.
ನಾಳೆ ಮಧ್ಯಾಹ್ನ 3 ಗಂಟೆಗೆ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಮೈಸೂರಿನ ಸರ್ಕಾರಿ ಅತಿಥಿ ಗೃಹದಲ್ಲಿ ಈ ಸಭೆ ನಡೆಯಲಿದ್ದು, ಸಭೆಯಲ್ಲಿ ದಸರಾ ಆನೆಗಳ ಆಯ್ಕೆ, ಉದ್ಘಾಟಕರ ಆಯ್ಕೆ ಸೇರಿದಂತೆ ಹಲವು ವಿಚಾರಗಳು ನಿರ್ಧಾರವಾಗಲಿದೆ.
ಸಭೆಯಲ್ಲಿ ಜಿಲ್ಲಾ ಉಸ್ತುವಾರಿಗಳು, ಪಾಲಿಕೆ ಮಹಾಪೌರರು, ಜಿಲ್ಲಾಧಿಕಾರಿಗಳು ಸ್ಥಳೀಯ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಭಾಗಿಯಾಗಲಿದ್ದಾರೆ. ಇನ್ನು ಕೊರೋನಾ ಹಿನ್ನೆಲೆ ರಾಜ್ಯ ಸರ್ಕಾರ ಈ ಬಾರಿ ದಸರಾವನ್ನು ಅರಮನೆ ಚಾಮುಂಡಿಬೆಟ್ಟಕ್ಕೆ ಸೀಮಿತಗೊಳಿಸಿ ಸರಳ ಮತ್ತು ಸಂಪ್ರದಾಯಕವಾಗಿ ಆಚರಿಸಲು ತೀರ್ಮಾನ ಕೈಗೊಂಡಿದೆ.
Key words: Mysore -Dasara -Working Committee -Meeting – tomorrow