ಮೈಸೂರು,ಏಪ್ರಿಲ್,3,2025 (www.justkannada.in): ಮೈಸೂರಿನ ಕ್ಯಾತಮಾರನಹಳ್ಳಿಯಲ್ಲಿರುವ ವಿವಾದಿತ ಸ್ಥಳದಲ್ಲಿ ಮದರಸಾ ಮಾಡಲು ಅನುಮತಿ ನೀಡಿರುವುದಾಗಿ ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್ ರೆಡ್ಡಿ ಹೈಕೋರ್ಟ್ ಗೆ ಮಾಹಿತಿ ನೀಡಿದ್ದಾರೆ.
ಈ ಬಗ್ಗೆ ಖುದ್ದು ಇಂದು ಹೈಕೋರ್ಟ್ ಗೆ ಮೈಸೂರು ಡಿಸಿ ಲಕ್ಷ್ಮೀಕಾಂತ್ ರೆಡ್ಡಿ ಅಧಿಕೃತ ಮಾಹಿತಿ ನೀಡಿದ್ದಾರೆ. ಹಲೀಂ ಸಾದಿಯಾ ಶೈಕ್ಷಣಿಕ ಸಂಸ್ಥೆ ಮತ್ತು ಮಸೀದಿ ಮತ್ತು ಮದರಸಾ ಮಾಡಲು ಮುಂದಾಗಿತ್ತು. ಇದಕ್ಕೆ ಸಾಕಷ್ಟು ಪರ ವಿರೋಧ ಚರ್ಚೆ ಶುರುವಾಗಿತ್ತು.
ಈ ನಡುವೆ 2016ರಲ್ಲಿ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದ ಆರ್.ಎಸ್.ಎಸ್ ಕಾರ್ಯಕರ್ತ ರಾಜು ಅವರ ಹತ್ಯೆಯಾಗಿತ್ತು. ಹತ್ಯೆಯಾದ ಬಳಿಕ ಕಾನೂನು ಸುವ್ಯವಸ್ಥೆ ಹಿನ್ನಲೆ ಮಸೀದಿಗೆ ಬೀಗ ಹಾಕಲಾಗಿತ್ತು. ಇದನ್ನು ಪ್ರಶ್ನಿಸಿ ಕೆಲ ತಿಂಗಳ ಹಿಂದೆ ಟ್ರಸ್ಟ್ ಸದಸ್ಯರು ಮಸೀದಿ ಬೀಗ ತೆರುವಿಗೆ ಕೋರಿ ಕೋರ್ಟ್ ಮೊರೆ ಹೋಗಿದ್ದರು.
ಈ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ಸಮಸ್ಯೆ ಬಗೆಹರಿಸುವಂತೆ ಮೈಸೂರು ಜಿಲ್ಲಾಧಿಕಾರಿಗೆ ಸೂಚನೆ ನೀಡಿತ್ತು. ನಂತರ ಮೈಸೂರು ಡಿಸಿ ಲಕ್ಷ್ಮೀಕಾಂತ್ ರೆಡ್ಡಿ ಅವರು ಹಿಂದೂ ಮುಸ್ಲಿಮರ ಸಭೆ ನಡೆಸಿದ್ದು , ಮದರಸಾ ತೆರೆಯಲು ಅನುಮತಿ ನೀಡಿದ್ದಾರೆ. ಈ ಬಗ್ಗೆ ಇದೀಗ ಡಿಸಿ ಲಕ್ಷ್ಮೀಕಾಂತ್ ರೆಡ್ಡಿ ಹೈಕೋರ್ಟ್ ಗೆ ಮಾಹಿತಿ ನೀಡಿದ್ದಾರೆ.
Key words: mysore, Permission, open, madrasa, Kyathamaranahalli, High Court, DC