ಮೈಸೂರು,ಅಕ್ಟೋಬರ್,28,2020(www.justkannada.in): ಮೈಸೂರು ಅರಮನೆ ಮಂಡಳಿ ಉಪನಿರ್ದೇಶಕರ ಸೇವೆಯಲ್ಲಿ ನಡೆದಿರುವ ಅಕ್ರಮ ವ್ಯವಹಾರಗಳ ಬಗ್ಗೆ ತನಿಖೆ ನಡೆಸುವಂತೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ನಡೆಸುತ್ತಿದ್ದ ಅನಿರ್ದಿಷ್ಟಾವಧಿ ಪ್ರತಿಭಟನೆಗೆ ಮೈಸೂರು ಜಿಲ್ಲಾಡಳಿತ ಮಣಿದಿದೆ.
ಅರಮನೆ ಮಂಡಳಿ ಉಪನಿರ್ದೇಶಕ ಟಿ.ಎಸ್.ಸುಬ್ರಹ್ಮಣ್ಯ ವಿರುದ್ಧ ತನಿಖೆ ನಡೆಸಲು ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆದೇಶ ಹೊರಡಿಸಿದ್ದಾರೆ. ಮೈಸೂರು ಅರಮನೆ ಮಂಡಳಿ ಉಪನಿರ್ದೇಶಕ ಟಿ.ಎಸ್ ಸುಬ್ರಹ್ಮಣ್ಯ ಅವರ ಸೇವೆಯಲ್ಲಿ ನಡೆದಿರುವ ಅಕ್ರಮ ವ್ಯವಹಾರಗಳ ಬಗ್ಗೆ ತನಿಖೆ ನಡೆಸುವಂತೆ ಆಗ್ರಹಿಸಿ ಕಳೆದ 9 ದಿನಗಳಿಂದ ದಲಿತ ಸಂಘರ್ಷ ಸಮಿತಿ ಮುಖಂಡ ಚೋರನಹಳ್ಳಿ ಶಿವಣ್ಣ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುತ್ತಿತ್ತು.
ಕಳೆದ 9 ದಿನಗಳಿಂದ ಜಿಲ್ಲಾಧಿಕಾರಿ ಕಛೇರಿ ಬಳಿ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸುತ್ತಿದ್ದ ಪ್ರತಿಭಟನಾಕಾರರು ತಮ್ಮ ಮನವಿಗೆ ಸ್ಪಂದಿಸದಿದ್ದರೆ ಅರೆಬೆತ್ತಲೆಯಾಗಿ ಪ್ರತಿಭಟನೆ ನಡೆಸುವುದಾಗಿ ಜಿಲ್ಲಾಡಳಿತಕ್ಕೆ ಎಚ್ಚರಿಕೆ ನೀಡಿದ್ದರು.
ಇದೀಗ ಪ್ರತಿಭಟನಾಕಾರರ ಹೋರಾಟಕ್ಕೆ ಮಣಿದಿರುವ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, 9 ದಿನಗಳ ಪ್ರತಿಭಟನೆಯ ಬಳಿಕ ಟಿ.ಎಸ್ ಸುಬ್ರಹ್ಮಣ್ಯ ವಿರುದ್ದ ತನಿಖೆಗೆ ಆದೇಶಿಸಿದ್ದಾರೆ. ತನಿಖಾ ಆದೇಶ ಪ್ರತಿ ನೀಡಿದ ನಂತರ ಪ್ರತಿಭಟನಾಕಾರರು ಪ್ರತಿಭಟನೆ ಹಿಂಪಡೆದಿದ್ದಾರೆ. ತಮ್ಮ ಮನವಿಗೆ ಜಿಲ್ಲಾಡಳಿತ ಸ್ಪಂದಿಸಿದ ಹಿನ್ನೆಲೆಯಲ್ಲಿ ಚೋರನಹಳ್ಳಿ ಶಿವಣ್ಣ ಪ್ರತಿಭಟನಾ ಸ್ಥಳ ತೆರವು ಮಾಡಿದರು.
Key words: Mysore DC-ordered – inquiry- against -Mysore Palace Board -Deputy Director -TS Subramanya.