ಮೈಸೂರು,ಮೇ,5,2021(www.justkannada.in): ಚಾಮರಾಜನಗರದಲ್ಲಿ ಕೋವಿಡ್ ಸೋಂಕಿತರ ಸರಣಿ ಸಾವಿನ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಗದ್ಗದಿತರಾದ ಘಟನೆ ನಡೆಯಿತು.
ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ 24 ರೋಗಿಗಳು ಸಾವನ್ನಪ್ಪಿದ ವಿಚಾರ ಕುರಿತು ಮಾತನಾಡಿದ ಮೈಸೂರು ಡಿಸಿ ರೋಹಿಣಿ ಸಿಂಧೂರಿ, ಚಾಮರಾಜನಗರದಲ್ಲಿ ಆಗಿರುವುದಕ್ಕೆ ನೋವಿದೆ. ಸಾಕಷ್ಟು ಊಹಾಪೋಹಗಳು ನಡೆಯುತ್ತಿವೆ. ಇದ್ರಿಂದ ನನಗೆ ತುಂಬಾ ನೋವಾಗಿದೆ. ನನ್ನ 10 ವರ್ಷದ ಸೇವೆಯಲ್ಲಿ ನಾನು ಎಂದು ಈ ರೀತಿ ಕೆಲಸ ಮಾಡಿಲ್ಲ. ದೇಶದ ಯಾವುದೇ ಮೂಲೆಯಲ್ಲಿ ಆದ ಸಾವು ಸಾವೇ. ಸತ್ತವರ ಮನೆಯಲ್ಲಿ ನೋವಿರುತ್ತದೆ. ಈ ವೇಳೆ ಈ ರೀತಿ ಆರೋಪ ಮಾಡಬಾರದು. ಮಾಡಿದರೆ ನಮ್ಮ ಮೇಲೆ ತಪ್ಪು ಅಭಿಪ್ರಾಯ ಬರುತ್ತದೆ. ಅವರು ಮಾಧ್ಯಮದಲ್ಲಿ ಹೇಳಿಕೆ ನೀಡದಿದ್ದರೆ ನಾನು ಈ ಬಗ್ಗೆ ಪ್ರತಿಕ್ರಿಯೆ ನೀಡುತ್ತಿರಲಿಲ್ಲ. ಅವರು ಅಸತ್ಯವಾದ ವಿಚಾರಗಳನ್ನು ಹೇಳಿದ್ದಾರೆ. ಅದಕ್ಕೆ ಸ್ಪಷ್ಟೀಕರಣ ನೀಡುತ್ತಿದ್ದೇನೆ ಎಂದು ಹೇಳಿದರು.
ತನಿಖೆಯಲ್ಲಿ ಎಲ್ಲವೂ ಗೊತ್ತಾಗಲಿದೆ. ಚಾಮರಾಜನಗರಕ್ಕೆ ಕಷ್ಟದ ವೇಳೆ ಸ್ಪಂದಿಸಿಲ್ಲ ಎಂಬುದು ಸತ್ಯಕ್ಕೆ ದೂರವಾದ ಮಾತು. ಅವರ ಕಷ್ಟ ಕಾಲದಲ್ಲಿ ರಿಸ್ಕ್ ತೆಗೆದುಕೊಂಡು ಆಕ್ಸಿಜನ್ ಕಳುಹಿಸಿದ್ದೇವೆ. ನಾವು ಆಸ್ಪತ್ರೆಯಲ್ಲಿದ್ದ 40 ಸಿಲಿಂಡರ್ ಕಳುಹಿಸಿದ್ದೇವೆ. ಎಲ್ಲೂ ಸಹ ಆಸ್ಪತ್ರೆಯಿಂದ ಕಳುಹಿಸಿ ರಿಸ್ಕ್ ತೆಗೆದುಕೊಳ್ಳುವುದಿಲ್ಲ. ಇದು ಮಾನವೀಯತೆ ಅಲ್ವಾ ? ಎಂದು ಚಾಮರಾಜನಗರ ಡಿಸಿ ಎಂ ಆರ್ ರವಿ ಅವರಿಗೆ ರೋಹಿಣಿ ಸಿಂಧೂರಿ ಪ್ರಶ್ನೆ ಮಾಡಿದರು.
ಆಕ್ಸಿಜನ್ ಅನ್ನ ಮೊದಲೇ ಕೇಳಿದ್ದರೆ ಮೊದಲೇ ಕಳುಹಿಸುತ್ತಿದ್ದೆವು. ಅವರು ಸರಿಯಾಗಿ ನಿರ್ವಹಣೆ ಮಾಡದೆ ನಮ್ಮ ಮೇಲೆ ಆರೋಪ ಮಾಡುತ್ತಿದ್ದಾರೆ. ನಮ್ಮ ಜಿಲ್ಲೆಯಲ್ಲಿ ಈ ರೀತಿ ಆಗಿದ್ದರೆ ಯಾರನ್ನಾದರೂ ಹೇಗಾದರೂ ಸಂಪರ್ಕಿಸಿ ಆಕ್ಸಿಜನ್ ಪಡೆಯುತ್ತಿದ್ದೆವು. ಅವರು ಆ ಕೆಲಸ ಮಾಡಿಲ್ಲ. ನಾವು ಜನರ ಪ್ರಾಣ ಉಳಿಸಲು 24/7ಕೆಲಸ ಮಾಡುತ್ತಿದ್ದೇವೆ. ಈ ರೀತಿ ಹೇಳಿದರೆ ನಮಗೂ ನೋವಾಗುತ್ತದೆ ಎಂದು ಚಾಮರಾಜನಗರ ಜಿಲ್ಲಾಧಿಕಾರಿ ಆರೋಪಕ್ಕೆ ಮೈಸೂರು ಡಿಸಿ ರೋಹಿಣಿ ಸಿಂಧೂರಿ ಭಾವುಕರಾಗಿ ಸ್ಪಷ್ಟನೆ ನೀಡಿದರು.
ENGLISH SUMMARY…
“In my 10 years of service I have never done such work: Mysuru DC Rohini gets emotional
Mysuru, May 5, 2021 (www.justkannada.in): Mysuru District Deputy Commissioner Rohini Sindhuri got emotional over the incident of series of deaths that occurred at the Chamarajaranagar District Hospital recently.
Speaking about the death of 24 persons at the District Hospital in Chamarajanagara recently allegedly due to shortage of Oxygen supply, Deputy Commissioner of Mysuru District Rohini Sindhuri expressed her pain about the rumors going on. “I am personally very much hurt about the incident and all the rumors that are going on. In my 10 years of service, I have never committed any grievous mistake. The investigation will expose everything. It is wrong to allege that we didn’t respond to the difficult situation in Chamarajanagara. We sent 40 oxygen cylinders at our risk. Nobody will take the risk of sending oxygen cylinders from a hospital. Is it not humanity?!,” she questioned the Chamarajanagara DC M.R. Ravi.
“If the Chamarajanagara Deputy Commissioner’s office would have made a request earlier, we would have sent it. They failed to handle the situation properly and in turn making us responsible. If would have faced such a situation where we would have contacted someone and would have made the required arrangements. They did not do it. We are working 24/7 to save lives. Such allegations hurt us,” she responded to the Chamarajanagara DCs comments, with tears in her eyes.
Keywords: Mysuru DC Rohini sindhuri/ Chamarajanagar DC M.R. Ravi/ Chamarajanagara incident/ death of 24 people/ due to oxygen scarcity/ Mysuru DC gets emotional
Key words: Mysore DC -Rohini Sindhuri- Emotion-chamarajangar-oxigen-death