ಮೈಸೂರು, ಜುಲೈ 18, 2021: ನಾಳೆ ಜು.19 ಮತ್ತು 21 ರಂದು ಎಸ್.ಎಸ್.ಎಲ್.ಸಿ ಪರೀಕ್ಷೆ ನಡೆಯಲಿದ್ದು, ಪರೀಕ್ಷೆ ಪ್ರಕ್ರಿಯೆಗಾಗಿ ಜಿಲ್ಲಾಡಳಿತ ಸಕಲ ಸಿದ್ಧತೆ ನಡೆಸಿದೆ.
ಪರೀಕ್ಷಾ ಕೇಂದ್ರಗಳ ಬಳಿ 144 ಮುನ್ನೆಚ್ಚರಿಕಾ ಕ್ರಮವಾಗಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಜಿಲ್ಲೆಯಲ್ಲಿ ಒಟ್ಟು 38,989 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
ಒಂದೊಂದು ಕೊಠಡಿಗೆ 12ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ ಬರೆಯಲು ಅವಕಾಶವಿದ್ದು, ಜಿಲ್ಲೆಯಲ್ಲಿ ಒಟ್ಟು 237 ಪರೀಕ್ಷಾ ಕೇಂದ್ರಗಳು ನಿಗದಿ ಪಡಿಸಲಾಗಿದೆ.
ನಗರ-72, ಗ್ರಾಮಾಂತರ- 165ಪರೀಕ್ಷೆ ಕೇಂದ್ರಗಳನ್ನು ಸಿದ್ಧಪಡಿಸಲಾಗಿದೆ. ರೆಗ್ಯುಲರ್ 37.474, ಖಾಸಗಿ -1081, ವಿಶೇಷ ಮಕ್ಕಳು-434 ವಿಧ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲಿದ್ದಾರೆ.
ಪರೀಕ್ಷಾ ಪ್ರಕ್ರಿಯೆಗೆ ಒಟ್ಟು ಪರೀಕ್ಷೆ ಸಿಬ್ಬಂದಿ-3500ಮಂದಿ ನಿಯೋಜಿಸಲಾಗಿದೆ. ಕೇಂದ್ರಗಳ ಸುತ್ತಮುತ್ತಲಿರುವ ಜೆರಾಕ್ಸ್ ಅಂಗಡಿಗಳು,
ಕೆಫೆ, ಕಂಪ್ಯೂಟರ್ ಕೇಂದ್ರಗಳನ್ನು ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರದ ಬಳಿ ಗುಂಪುಗೂಡುವುದು, ನಿಲ್ಲುವುದು ಮತ್ತು ವಾಹನಗಳನ್ನು ಪಾರ್ಕಿಂಗ್ ಗೂ ನಿಷೇಧಿಸಲಾಗಿದೆ.