ಮೈಸೂರು: ಕಲುಷಿತ ನೀರು ಕುಡಿದು ಅಸ್ವಸ್ಥನಾಗಿದ್ದ ಯುವಕ  ಸಾವು.

ಮೈಸೂರು,ಮೇ,21,2024 (www.justkannada.in): ಮೈಸೂರು ತಾಲ್ಲೂಕಿನ  ಡಿ.ಸಾಲುಂಡಿ ಗ್ರಾಮದಲ್ಲಿ  ಕಲುಷಿತ ನೀಡು ಕುಡಿದು ಅಸ್ವಸ್ಥ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಚಿಕಿತ್ಸೆ ಫಲಿಸದೆ ಯುವಕನೊಬ್ಬ ಸಾವನ್ನಪ್ಪಿದ್ದಾರೆ.

ಸಾಲುಂಡಿ ಗ್ರಾಮದ ಕನಕರಾಜು ಮೃತ ಯುವಕ.  ಕಲುಷಿತ ನೀರು ಸೇವಿಸಿ ವಾಂತಿ ಭೇದಿಯಿಂದ ಬಳಲುತ್ತಿದ್ದ ಎನ್ನಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಆತ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.

ಚಾಮುಂಡೇಶ್ವರಿ ಕ್ಷೇತ್ರದ ಡಿ.ಸಾಲುಂಡಿ ಗ್ರಾಮದಲ್ಲಿ ನಿನ್ನೆ ಸಂಜೆ ಕಲುಷಿತ ನೀರು ಸೇವಿಸಿ ಹಲವರಿಗೆ ವಾಂತಿ, ಬೇದಿ ಕಾಣಿಸಿಕೊಂಡಿತ್ತು. ತಡರಾತ್ರಿ ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ ಗ್ರಾಮಕ್ಕೆ ಆಗಮಿಸಿ ಜನರ ಸಮಸ್ಯೆ ಆಲಿಸಿದ್ದು,  ಗ್ರಾಮದ ಜನರಿಗೆ ವೈದ್ಯರು ಆರೋಗ್ಯ ತಪಾಸಣೆ ನಡೆಸಿದ್ದಾರೆ.

ಮುಂಜಾಗೃತಾ ಕ್ರಮವಾಗಿ ಗ್ರಾಮದಲ್ಲೇ ಅಧಿಕಾರಿಗಳು ಅಂಬುಲೆನ್ಸ್ ನಿಲ್ಲಿಸಿಕೊಂಡಿದ್ದು, ಆರೋಗ್ಯ ಸಮಸ್ಯೆ ಕಾಣಿಸಿಕೊಂಡರೆ ತಕ್ಷಣ ಆಸ್ಪತ್ರೆಗೆ ರವಾನಿಸಲು ವೈದ್ಯರು ಸಿದ್ಧತೆ ನಡೆಸಿದ್ದಾರೆ. ಈಗಾಗಲೇ 15 ಜನರು‌ ನಗರದ ವಿವಿಧ ಆಸ್ಪತ್ರೆಗಳಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ

ಈ ಮಧ್ಯೆ ಯುವಕ ಕನಕರಾಜ್ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಆಸ್ಪತ್ರೆಗೆ ಭೇಟಿ ನೀಡಿದ ಶಾಸಕ ಜೆ.ಟಿ ದೇವೇಗೌಡ ನೀಡಿದ್ದಾರೆ.

Key words:  Mysore, drinking, contaminated, water, died