ಮೈಸೂರು, ಅಕ್ಟೋಬರ್,1,2024 (www.justkannada.in): ವಿಶ್ವ ವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಎರಡು ದಿನ ಬಾಕಿ ಇದ್ದು ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಮೈಸೂರು ಪ್ರವಾಸ ಕೈಗೊಂಡಿದ್ದಾರೆ.
ನಾಳೆ ರಾತ್ರಿ 8.30ಕ್ಕೆ ಮೈಸೂರಿಗೆ ಆಗಮಿಸಲಿರುವ ಸಿಎಂ ಸಿದ್ದರಾಮಯ್ಯ ಅಕ್ಟೋಬರ್ 3 ಗುರವಾರದಂದು ನಡೆಯುವ ಮೈಸೂರು ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಅಂದು ಸಿಎಂ ಸಿದ್ದರಾಮಯ್ಯ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದು ಅದರ ವಿವರ ಈ ಕೆಳಕಂಡಂತಿದೆ.
02/10/2024 ಬುಧವಾರ
ರಾತ್ರಿ 8 ಗಂಟೆಗೆ: ಹೆಚ್.ಎ.ಎಲ್ ವಿಮಾನ ನಿಲ್ದಾಣ, ಬೆಂಗಳೂರು (ವಿಶೇಷ ವಿಮಾನ V1 MEI ಮೂಲಕ)
ರಾತ್ರಿ 08.25 : ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮನ, ಮೈಸೂರಿನಲ್ಲೇ ವಾಸ್ತವ್ಯ
03/10/2024: ಗುರುವಾರ
ಚಾಮುಂಡಿ ಬೆಟ್ಟದಲ್ಲಿ ಬೆಳಿಗ್ಗೆ 09.15ಕ್ಕೆ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ಅಗ್ರಪೂಜೆಯೊಂದಿಗೆ 2024ರ ದಸರಾ ಮಹೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ
ಬೆಳಿಗ್ಗೆ 11.30ಕ್ಕೆ ಘಟಿಕೋತ್ಸವ ಭವನ ಕರ್ನಾಟಕ ಮುಕ್ತ ವಿಶ್ವ ವಿದ್ಯಾನಿಲಯ ದಸರಾ ಚಲನಚಿತ್ರೋತ್ಸವದ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗಿ
ಮಧ್ಯಾಹ್ನ 12.30ಕ್ಕೆ ಕುಪ್ಪಣ್ಣ ಪಾರ್ಕ್ (ನಿಶಾದ್ ಬಾಗ್) ನಲ್ಲಿ ಫಲಪುಷ್ಪ ಪ್ರದರ್ಶನ ಉದ್ಘಾಟನೆ ಮಾಡಲಿದ್ದಾರೆ.
ಸಂಜೆ 4ಗಂಟೆಗೆ ಶ್ರೀ ದೇವರಾಜ್ ಅರಸು ವಿವಿಧೋದ್ದೇಶ ಕ್ರೀಡಾಂಗಣ. ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರ, ಮೈಸೂರು ಇಲ್ಲಿ ಆಯೋಜಿಸಿರುವ ದಸರಾ ಕುಸ್ತಿ ಪಂದ್ಯಾವಳಿ ಉದ್ಘಾಟನೆ ಮಾಡಲಿದ್ದಾರೆ.
ಸಂಜೆ 4.30ಕ್ಕೆ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ರಾಜ್ಯ ದಸರಾ ಸಿ.ಎಂ. ಕಪ್ ಕ್ರೀಡಾಕೂಟಕ್ಕೆ ಚಾಲನೆ ನೀಡಲಿದ್ದಾರೆ.
ಸಂಜೆ 6 ಗಂಟೆಗೆ ಅರಮನೆ ಆವರಣದಲ್ಲಿ ನಡೆಯುವ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ ಪಾಲ್ಗೊಳ್ಳಲಿದ್ದಾರೆ
ರಾತ್ರಿ 7.30ಕ್ಕೆ ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದಲ್ಲಿ ವಸ್ತು ಪ್ರದರ್ಶನ ಉದ್ಘಾಟನೆ ಮಾಡಿ ಅಂದು ರಾತ್ರಿ ಮೈಸೂರಿನಲ್ಲೇ ಸಿಎಂ ಸಿದ್ದರಾಮಯ್ಯ ವಾಸ್ತವ್ಯ ಹೂಡಲಿದ್ದಾರೆ. ಅಕ್ಟೋಬರ್ 4 ರಂದು ಬೆಳಿಗ್ಗೆ 10 ಗಂಟೆಗೆ ಮೈಸೂರು ವಿಮಾನನಿಲ್ದಾಣದಿಂದ ಹೊರಟು ಕೊಪ್ಪಳ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
Key words: Mysore Dussehra-2024, CM Siddaramaiah, programs