ಮೈಸೂರು, ನವೆಂಬರ್,3,2020(www.justkannada.in): ಏಷಿಯನ್ ಪೇಂಟ್ಸ್ ಕಾರ್ಖಾನೆಯಲ್ಲಿ ರೈತರ ಮಕ್ಕಳಿಗೆ ಕೆಲಸ ಕೊಡಿಸುವಂತೆ ಒತ್ತಾಯಿಸಿ ಏಷಿಯನ್ ಪೇಂಟ್ಸ್ ಮತ್ತು ಜಿಲ್ಲಾಡಳಿತ ವಿರುದ್ಧ ರೈತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಬಳಿ ಜಮಾಯಿಸಿದ ರೈತರು ಏಷಿಯನ್ ಪೇಂಟ್ಸ್ ಕಾರ್ಖಾನೆ ಹಾಗೂ ಜಿಲ್ಲಾಡಳಿತದ ವಿರುದ್ಧ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಕಾರ್ಖಾನೆ ನಿರ್ಮಾಣಕ್ಕೆ ಭೂಮಿ ನೀಡಿದ ರೈತರಿಗೆ ಇದೇ ಕಾರ್ಖಾನೆಯಲ್ಲಿ ಕೆಲಸ ನೀಡುವುದಾಗಿ ಭರವಸೆ ನೀಡಲಾಗಿತ್ತು. ಈ ಸಂಬಂಧ ಜಿಲ್ಲಾಡಳಿತ ಸಮನ್ವಯ ಸಭೆ ನಡೆಸಿ ರೈತರ ಮಕ್ಕಳಿಗೆ ಕೆಲಸ ಕೊಡಿಸಬೇಕಿತ್ತು. ಆದರೆ ಕಾರ್ಖಾನೆ ಅಧಿಕಾರಿಗಳ ಜೊತೆ ಸಭೆ ನಡೆಸಲು ಜಿಲ್ಲಾಡಳಿತ ಹಿಂದೇಟು ಹಾಕುತ್ತಿದೆ. ಈಗಾಗಲೇ ಜಿಲ್ಲಾಡಳಿತ ಮೂರು ಬಾರಿ ಸಭೆ ಮುಂದೂಡಿದೆ.
ಇಂದೂ ಕೂಡಾ ಸಭೆ ನಡೆಸುತ್ತೇವೆಂದು ಹೇಳಿ ಮತ್ತೆ ಮುಂದೂಡಿದ್ದಾರೆ. ರೈತರ ಬಗ್ಗೆ ಜಿಲ್ಲಾಡಳಿತ ಪದೇಪದೇ ನಿರ್ಲಕ್ಷ್ಯ ವಹಿಸುತ್ತಿದೆ. ಕೂಡಲೇ ಈ ಸಂಬಂಧ ಜಿಲ್ಲಾಧಿಕಾರಿಗಳು ಸಭೆ ನಡೆಸಿ ರೈತರಿಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಪ್ರತಿಭಟನಾನಿರತ ರೈತರು ಜಿಲ್ಲಾಡಳಿತಕ್ಕೆ ಆಗ್ರಹಿಸಿದ್ದಾರೆ.
Key words: mysore-Farmers’-protest-children –job-Asian Paints factory