ನಾನು ರಾಷ್ಟ್ರ ರಾಜಕಾರಣಕ್ಕೆ ಹೋಗುವುದು ಊಹಾಪೋಹ-  ಮಾಜಿ ಸಿಎಂ ಸಿದ್ಧರಾಮಯ್ಯ ಸ್ಪಷ್ಟನೆ.

ಮೈಸೂರು,ಅಕ್ಟೋಬರ್,9,2021(www.justkannada.in):   ನಾನು ರಾಷ್ಟ್ರ ರಾಜಕಾರಣಕ್ಕೆ ಹೋಗುವುದಿಲ್ಲ. ರಾಷ್ಟ್ರ ರಾಜಕಾರಣಕ್ಕೆ ಹೋಗುವುದು ಊಹಾಪೋಹ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ.

ಮೈಸೂರಿನಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಮಾಜಿ ಸಿಎಂ ಸಿದ್ಧರಾಮಯ್ಯ, ನಾನು ರಾಷ್ಟ್ರ ರಾಜಕಾರಣಕ್ಕೆ ಹೋಗುವುದಿಲ್ಲ. ಸೋನಿಯಾಗಾಂಧಿಯವರ ಜತೆ ಈ ಬಗ್ಗೆ ಚರ್ಚೆಯೂ ಮಾಡಿಲ್ಲ. ಸುಮ್ಮನೆ ಊಹಾಪೋಹದ ಚರ್ಚೆಗಳು ಬೇಡ. ನಾನು ಎಂದೂ ಆ ಯೋಚನೆ ಮಾಡಿಯೂ ಇಲ್ಲ. ಆ ಬಗ್ಗೆ ಚರ್ಚೆ ಬೇಡ, ನಾನು ರಾಜ್ಯ ರಾಜಕಾರಣದಲ್ಲೇ ಸಕ್ರಿಯನಾಗಿರುತ್ತೇನೆ ಎಂದು ತಿಳಿಸಿದರು.

ಸಿಂದಗಿ ಮತ್ತು ಹಾನಗಲ್ ಉಪಚುನಾವಣೆ ಕುರಿತು ಪ್ರತಿಕ್ರಿಯಿಸಿದ ಸಿದ್ಧರಾಮಯ್ಯ, ಎರಡೂ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಗೆಲ್ಲಲಿದೆ. ಉಪಚುನಾವಣೆ ಫಲಿತಾಂಶ ಭವಿಷ್ಯದ ಚುನಾವಣೆ ದಿಕ್ಸೂಚಿ ಅಂತ ಹೇಳುವುದಿಲ್ಲ. ಹಾಗೇ ಹೇಳುವುದಕ್ಕೂ ಸಾಧ್ಯವಿಲ್ಲ. ಆದರೆ ಈ ಫಲಿತಾಂಶದಿಂದ ಈ ಸರ್ಕಾರದ ಮೇಲೆ ಜನರ ಅಭಿಪ್ರಾಯ ಏನು ಎಂಬುದು ಗೊತ್ತಾಗುತ್ತೆ. ಜನ ಕೇಂದ್ರ ಹಾಗೂ ರಾಜ್ಯ ಎರಡೂ ಸರ್ಕಾರಗಳಿಂದ ಬೇಸತ್ತಿದ್ದಾರೆ. ಹೀಗಾಗಿ ಕಾಂಗ್ರೆಸ್ ಅನ್ನು ಎರಡೂ ಕ್ಷೇತ್ರಗಳಲ್ಲಿ ಗೆಲ್ಲಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಜೆಡಿಎಸ್ ನವರು ಒಳ್ಳೆಯ ಉದ್ದೇಶದಿಂದಂತೂ ಅಲ್ಪಸಂಖ್ಯಾತರಿಗೆ ಟಿಕೇಟ್ ಕೊಟ್ಟಿಲ್ಲ. ಅಲ್ಪಸಂಖ್ಯಾತರ ಮತಗಳನ್ನು ವಿಂಗಡಿಸುವುದೇ ಅವರ ಉದ್ದೇಶ. ಆದರೆ ಜನ ಬುದ್ದಿವಂತರಿದ್ದಾರೆ. ಇಂತಹ ತಂತ್ರಗಳು ಜನರಿಗೆ ಅರ್ಥವಾಗುತ್ತವೆ ಎಂದು ಸಿದ್ಧರಾಮಯ್ಯ ಟೀಕಿಸಿದರು.

ಮಾಜಿ ಸಿಎಂ ಬಿಎಸ್ ವೈ ಆಪ್ತರ ಮನೆ ಮೇಲೆ ಐಟಿ ದಾಳಿ ಕುರಿತು ಪ್ರತಿಕ್ರಿಯಿಸಿದ ಸಿದ್ಧರಾಮಯ್ಯ, ಐಟಿ ದಾಳಿಯಲ್ಲಿ ರಾಜಕೀಯ ಇದೆ ಎಂಬುದು ನನ್ನ ಅನುಮಾನ. ಯಡಿಯೂರಪ್ಪ ವಿಜಯೇಂದ್ರ ಆಪ್ತರನ್ನೇ ಸೆಲೆಕ್ಟ್ ಮಾಡಿಕೊಂಡು ದಾಳಿ ಮಾಡಿರೋದು. ಸಾಕಷ್ಟು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ನನಗಂತು ಇದರಲ್ಲಿ ರಾಜಕೀಯ ವಾಸನೆ ಬರುತ್ತಿದೆ ಎಂದು ಹೇಳಿದರು.

Key words: mysore- former CM-siddaramaiah- speculation -national politics

ENGLISH SUMMARY..

Former CM Siddu says his entry into national politics are just rumours
Mysuru, October 9, 2021 (www.justkannada.in): Former Chief Minister Siddaramaiah has clarified that he is not going to national politics and the talk about this was all just rumours.
Speaking to the press persons today in Mysuru he informed that he doesn’t have any plan of entering into national politics nor has he met Congress leader Sonia Gandhi. “Please don’t heed to rumours. I have not even thought about it. There is no need to discuss it, I will be active in State politics,” he clarified.
He informed that the Congress party would win in both the Sindhagi and Hanagal byelections and also said that the results would be a compass for the Congress party in the state in the future. However, he said that it would decide the people’s pulse.
Keywords: Former CM Siddaramaiah/ National politics/ rumours