ಬಿಜೆಪಿ ಕಾರ್ಯಕರ್ತರು ‘ಕೈ’ ಗೆ ಸೇರ್ಪಡೆ: ಕಾಂಗ್ರೆಸ್ ಪಕ್ಷ ಬಿಟ್ಟು ಹೋದವರಿಗೆ ಮತ್ತೆ ಟಾಂಗ್ ಕೊಟ್ಟ ಸಿದ್ಧರಾಮಯ್ಯ.

ಮೈಸೂರು,ಜುಲೈ,7,2021(www.justkannada.in):  ಪದೇ ಪದೇ ದ್ರೋಹ ಮಾಡುವವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಬಾರದು‌ ಎಂದು ಹೇಳುವ ಮೂಲಕ ಕಾಂಗ್ರೆಸ್ ಪಕ್ಷ ಬಿಟ್ಟು ಹೋದವರಿಗೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು  ಟಾಂಗ್ ನೀಡಿದ್ದಾರೆ.

ಇಂದು ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಬಿಜೆಪಿಯ ಹಲವು ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆಗೊಂಡರು. ಪ್ರಮುಖ ಲಿಂಗಾಯತ ಸಮುದಾಯದ ನಾಯಕರು, ವರುಣ, ಕೆ.ಆರ್ ಹಾಗೂ ಎನ್ ಆರ್ ಕ್ಷೇತ್ರದ ಹಲವು ನಾಯಕರು ಕಾಂಗ್ರೆಸ್  ಗೆ ಸೇರ್ಪಡೆಗೊಂಡರು. ಆಲನಹಳ್ಳಿ ಪುಟ್ಟಸ್ವಾಮಿ, ಪಾಲಿಕೆ ಮಾಜಿ ಸದಸ್ಯ ಪ್ರದೀಪ್ ಕುಮಾರ್, ಷಡಕ್ಷರಿ ಸೇರಿ ಸಿಎಂ ಪುತ್ರ ಬಿವೈ ವಿಜಯೇಂದ್ರ ಬಣದಲ್ಲಿದ್ದ ಹಲವು ಮಂದಿ ಕಾಂಗ್ರೆಸ್ ಗೆ ಸೇರ್ಪಡೆಯಾದರು.

lockdown-government –responsibility- Opposition leader -Siddaramaiah
siddaramaih#profile..

ಈ ವೇಳೆ ಮಾತನಾಡಿದ ಮಾಜಿ ಸಿಎಂ ಸಿದ್ಧರಾಮಯ್ಯ,  ಅಧಿಕಾರಕ್ಕಾಗಿ ಯಾರೂ ಪಕ್ಷಕ್ಕೆ ಬರಬಾರದು. ಜನಸೇವೆಯ ಗುರಿ ಇದ್ದವರನ್ನು ಮಾತ್ರ ಪಕ್ಷಕ್ಕೆ ಸೇರಿಸಿಕೊಳ್ಳಬೇಕು. ಯಾರು ಬೇಕಾದರೂ ಪಕ್ಷಕ್ಕೆ ಬರಬಹುದು. ಆದರೆ ಪಕ್ಷಕ್ಕೆ ಪದೇ ಪದೇ ದ್ರೋಹ ಮಾಡುವವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಬಾರದು‌. ಅವರನ್ನು ಕ್ಷಮಿಸುವುದಿಲ್ಲ ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ. ಅಧಿಕಾರಕ್ಕಾಗಿ ಯಾರೂ ಪಕ್ಷಕ್ಕೆ ಬರಬಾರದು. ಜನಸೇವೆಯ ಗುರಿ ಇದ್ದವರನ್ನು ಮಾತ್ರ ಪಕ್ಷಕ್ಕೆ ಸೇರಿಸಿಕೊಳ್ಳಬೇಕು ಎಂದು ತಿಳಿಸಿದರು.

ಕಾಂಗ್ರೆಸ್ ಎಂದರೆ ಒಂದು ಚಳವಳಿ, ಬಡವರ ಪಕ್ಷ. ನಾವು ನೊಂದವರ ಪರ. ಅನ್ಯಾಯಕ್ಕೆ, ದೌರ್ಜನ್ಯಕ್ಕೆ ಒಳಗಾದವರಿಗೆ ನ್ಯಾಯ ದೊರಕಿಸಿಕೊಡುವುದು ನಮ್ಮ ಕರ್ತವ್ಯ. ಯಡಿಯೂರಪ್ಪ ಹಿಂಬಾಗಿಲಿನಿಂದ ಬಂದು ಸಿಎಂ ಆಗಿದ್ದಾರೆ. 17 ಶಾಸಕರನ್ನು ಖರೀದಿಸಿ ಸರ್ಕಾರ ರಚನೆ ಮಾಡಿ ಆಡಳಿತ ನಡೆಸುತ್ತಿದ್ದಾರೆ ಎಂದು ಸಿದ್ಧರಾಮಯ್ಯ ಟೀಕಿಸಿದರು.

Key words: mysore- former CM-Siddaramaiah –tong-left –Congress- party