ಸಾ.ರಾ.ಮಹೇಶ್ ಸಂಘಟನಾ ಚತುರ, ರಾಜ್ಯದಲ್ಲಿ ಜೆಡಿಎಸ್ ಕಟ್ಟಿದಾಯ್ತು, ಈಗ ದೇಶದಲ್ಲಿ ಪಕ್ಷ ಕಟ್ತಾರೆ ಬಿಡಿ : ಕಾಲೆಳೆದ ಜಿ.ಟಿ.ದೇವೇಗೌಡ

ಮೈಸೂರು, ಸೆ.05, 2019 : (www.justkannada.in news) ಎಚ್.ಡಿ.ಕುಮಾರಸ್ವಾಮಿ ಜತೆಜತೆಗೆ ಆಕ್ಟಿಂಗ್ ಸಿಎಂ ಆಗಿದ್ದ ಸಾ.ರಾ.ಮಹೇಶ್, ಸಂಘಟನೆಯಲ್ಲಿ ಬಹು ಚತುರ. ನನಗಿಂತಲೂ ಸಂಘಟನಾ ಶಕ್ತಿ ತುಸು ಹೆಚ್ಚಾಗಿಯೇ ಇದೆ. ಇಷ್ಟು ದಿನ ರಾಜ್ಯದಲ್ಲಿ ಅವರು ಜೆ.ಡಿ.ಎಸ್ ಕಟ್ಟಿದರು. ಈಗ ದೇಶದಲ್ಲಿ ಪಕ್ಷ ಕಟ್ಟಿ ತಮ್ಮ ಶಕ್ತಿ ಪ್ರದರ್ಶನ ಮಾಡ್ತಾರೆ. ಅವರಿಗೆ ಒಳ್ಳೆಯದಾಗಲಿ ಎಂದು ನಗು ನಗುತ್ತಲೆ ಮಾಜಿ ಸಚಿವ ಸಾ.ರಾ.ಮಹೇಶ್ ಕಾಲೆಳೆದ ಮಾಜಿ ಸಚಿವ ಜಿ.ಟಿ.ದೇವೆಗೌಡ.

ಜೆ.ಡಿ.ಎಸ್ ಸಂಘಟನೆ ಪಟ್ಟಿಯಲ್ಲಿ ತಮಗೆ ಸ್ಥಾನ ಸಿಗದೆ ಇರುವ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಜಿ ಸಚಿವ ಜಿ.ಟಿ.ದೇವೆಗೌಡ ಮಾಧ್ಯಮಗಳ ಜತೆ ಮಾತನಾಡಿ ಪಕ್ಷದ ಮುಖಂಡರ ಕಾಲೆಳೆದ್ದು ಹೀಗೆ…

ಹುಣಸೂರು ಉಪಚುನಾವಣೆಯಲ್ಲಿ ಜೆ.ಡಿ.ಎಸ್ ಸೋಲುತ್ತದೆ. ಕಾಂಗ್ರೆಸ್ ಅಭ್ಯರ್ಥಿ ಅಲ್ಲಿ ಗೆಲ್ಲುತ್ತಾರೆ. ನನ್ನ ಮಗನನ್ನು ಅಲ್ಲಿಂದ ಸ್ಪರ್ದಿಸುವಂತೆ ಮಾಜಿ ಸಿಎಂ ಹೆಚ್ಡಿಕೆ ಕೇಳಿದ್ದರು. ನಾನು ಇಲ್ಲ ಎಂದಿದ್ದೇನೆ. ನನ್ನ ಮಗ ಬೇಕಾದರೆ ಚಾಮುಂಡೇಶ್ವರಿ ಕ್ಷೇತ್ರದಿಂದ ಮುಂದೆ ಸ್ಪರ್ಧೆ ಮಾಡಲಿ. ಸದ್ಯಕ್ಕೆ ನಾವು ಯಾವ ಉಪಚುನಾವಣೆಯಲ್ಲು ಸ್ಪರ್ಧಿಸುತ್ತಿಲ್ಲ. ಚುನಾವಣೆಗೂ ಮುನ್ನವೆ ಜೆ.ಡಿ.ಎಸ್ ಭವಿಷ್ಯ ನುಡಿದ ಜಿಟಿಡಿ.

ಸಚಿವನಾಗಿದ್ದಾಗ ಕ್ಷಣಕ್ಷಣಕ್ಕೂ ಅವಮಾನ ಮತ್ತು ನೋವು ಉಣ್ಣುತ್ತಿದ್ದೆ. ಪ್ರಜಾಪ್ರಭುತ್ವಕ್ಕೆ ಮಾರಕವಾದವರು ರಾಜಕಾರಣಕ್ಕೆ ಬಂದು ನಮ್ಮಂತ ರಾಜಕಾರಣಿಗಳಿಗೆ ಮಾರಕವಾದ್ರು.

ನಾನು ಈಗ ಬಹಳ ಆರಾಮಾಗಿದ್ದೇನೆ. ಯಾವ ಅವಮಾನವು ಇಲ್ಲ, ನೋವು ಇಲ್ಲ. ಜತೆಗೆ ಈಗ ಜೆಡಿಎಸ್ ಸಂಘಟನೆ ಪಟ್ಟಿಯಲ್ಲಿ ನನ್ನ ಹೆಸರಿಲ್ಲದ ಕಾರಣ, ತಲೆಯ ಮೇಲಿದ್ದ ದೊಡ್ಡ ಬಂಡೆ ಇಳಿದಂತಾಗಿದೆ. ಚುನಾವಣ ರಾಜಕಾರಣದಿಂದ ನಿವೃತ್ತಿ‌ಪಡೆದು ಮಗನಿಗೆ ಬಿಟ್ಟುಕೊಡುತ್ತಿದ್ದೇನೆ. ಈಗ ಬಡವರ ಸೇವೆ ಮಾಡಿಕೊಂಡು ನೆಮ್ಮದಿಯಾಗಿದ್ದೇನೆ. ಮೈಸೂರಿನಲ್ಲಿ ಜಿ.ಟಿ.ದೇವೆಗೌಡ ಹೇಳಿಕೆ

ನಾನು ಉನ್ನತ ಶಿಕ್ಷಣ ಸಚಿವ ಸ್ಥಾನ ಬೇಡ ಎಂದು ಮುನಿಸಿಕೊಂಡಿದ್ದೆ. ಜಿ.ಟಿ.ದೇವೆಗೌಡ ನಮ್ಮಿಂದ ಇದೆ ರೀತಿ ದೂರವಾಗಲಿ ಎಂದು ವರಿಷ್ಠರು ಕಾಯುತ್ತಿದ್ದರು. ಮಂತ್ರಿ ಸ್ಥಾನ ತೆಗೆದುಕೊಳ್ಳದೆ ವಾಪಸ್ಸು ಹೋಗಲಿ ಎಂಬುದು ಅವರ ಮನದ ಇಂಗಿತವಾಗಿತ್ತು. ಆದರೆ ನಾನು ಮಾತ್ರ ಈ ಸರ್ಕಾರ ( ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರಕಾರ ) ಉಳಿಸಲು ಕೊನೆ ಕ್ಷಣದವರೆಗೂ ಹೋರಾಡಿದೆ. ಕುಮಾರಸ್ವಾಮಿಯನ್ನು ಸಿಎಂ ಮಾಡಲು, ಮೈತ್ರಿ ಸರಕಾರ ಉಳಿಸಲು ನಾನು ಶತ ಪ್ರಯತ್ನ ಮಾಡಿದ್ದೇನೆ.

ಚಾಮುಂಡೇಶ್ವರಿ ಜನರು ನನ್ನನ್ನು ಬಹಳ ಮತಗಳ ಅಂತರದಿಂದ ಗೆಲ್ಲಿಸಿದ್ದಾರೆ. ಅಂದಿನ ಸಿಎಂ ಸಿದ್ದರಾಮಯ್ಯ ವಿರುದ್ದ ಸುಮಾರು 35 ಸಾವಿರ ಮತಗಳ ಅಂತರದಿಂದ ಗೆಲ್ಲಿಸಿದ್ದಾರೆ. ಮೈಸೂರಿನಲ್ಲಿ ಮಾಜಿ ಸಚಿವ ಜಿ.ಟಿ.ದೇವೆಗೌಡ ಹೇಳಿಕೆ

ದಸರಾದಲ್ಲಿ ಬಿಜೆಪಿಯವರ ಜೊತೆ ಕೂರೋಲ್ಲ ಎಂಬ ಸಾ.ರಾ.ಮಹೇಶ್ ಹೇಳಿಕೆ ವಿಚಾರ, ನಾನು ಸಾ.ರಾ.ಮಹೇಶ್‌ರನ್ನ ಬಹು ಹತ್ತಿರದಿಂದ ನೋಡಿದ್ದೇನೆ. ಅವರು ಬಿಜೆಪಿಯಲ್ಲಿದ್ದಾಗ, ನಂತರ ಜೆಡಿಎಸ್ ಬಂದಾಗ, ಸಿಎಂ ಜೊತೆ ಇದ್ದಾಗಲೂ ನೋಡಿದ್ದೇನೆ. ಅವರ ಬಗ್ಗೆ ನಾನು ಕಾಮೆಂಟ್ ಮಾಡೋದೆ ಇಲ್ಲ. ಮೈಸೂರಿನಲ್ಲಿ ಶಾಸಕ ಜಿ.ಟಿ.ದೇವೇಗೌಡ ಹೇಳಿಕೆ.

key words : mysore-g.t.devegowda-jds-bjp-sa.ra.mahesh-mysore