ಮೈಸೂರು,ಆಗಸ್ಟ್, 31,2021(www.justkannada.in): ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ಧ ಮೈಸೂರಿನಲ್ಲಿ ನಡೆದ ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಆರು ಮಂದಿ ಆರೋಪಿಗಳನ್ನ ಎಡೆಮುರಿ ಕಟ್ಟಿ ಕೋರ್ಟ್ ಗೆ ಹಾಜರುಪಡಿಸಿ ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.
ಈ ನಡುವೆ ಕಳೆದ 10 ದಿನಗಳಿಂದ ಪ್ರಕೃತಿ ಚಿಕಿತ್ಸಾಲಯದಲ್ಲಿ ಚಿಕಿತ್ಸೆ ಪಡೆದು ವಾಪಸ್ ಆಗಿರುವ ವಿಪಕ್ಷ ನಾಯಕ ಸಿದ್ಧರಾಮಯ್ಯ ನಾಳೆ ಮೈಸೂರಿಗೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 1ಕ್ಕೆ ಮೈಸೂರಿಗೆ ಆಗಮಿಸಲಿರುವ ಸಿದ್ದರಾಮಯ್ಯ, ಸಾಮೂಹಿಕ ಅತ್ಯಾಚಾರ ನಡೆದ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಬಳಿಕ ಪೊಲೀಸ್ ಅಧಿಕಾರಿಗಳೊಂದಿಗೆ ಸಿದ್ಧರಾಮಯ್ಯ ಸಮಾಲೋಚನೆ ನಡೆಸಲಿದ್ದಾರೆ.
ಇನ್ನು ಪ್ರಕರಣ ಸಂಬಂಧ ಈಗಾಗಲೇ ಕಾಂಗ್ರೆಸ್ ಸತ್ಯಶೋಧನಾ ಸಮಿತಿ ರಚನೆ ಮಾಡಿದ್ದು, ಮಾಜಿ ಸಂಸದ ವಿ.ಎಸ್ ಉಗ್ರಪ್ಪ ನೇತೃತ್ವದಲ್ಲಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.
Key words: Mysore-gang rape –case-Former CM- Siddaramaiah – visit – tomorrow.