ಮೈಸೂರು,ಜು,9,2020(www.justkannada.in): ನಗರಗಳಲ್ಲಿ ಅಬ್ಬರಿಸುತ್ತಿದ್ದ ಮಹಾಮಾರಿ ಕೊರೋನಾ ಸೋಂಕು ಇದೀಗ ಗ್ರಾಮಗಳಿಗೂ ಲಗ್ಗೆ ಇಟ್ಟಿದೆ.
ಹೆಚ್.ಡಿ ಕೋಟೆ ತಾಲ್ಲೂಕಿನ ತೊರವಳ್ಳಿ ಗ್ರಾಮದಲ್ಲಿನ ಆಶಾ ಕಾರ್ಯಕರ್ತೆಗೆ ಕೊರೋನಾ ಸೋಂಕಿರುವುದು ದೃಢವಾಗಿದ್ದು ತೊರವಳ್ಳಿ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದೆ. ಸೋಂಕಿತ ಆಶಾ ಕಾರ್ಯಕರ್ತೆಯನ್ನ ಜಿಲ್ಲಾ ಕೋವಿಡ್ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಸೋಂಕಿತ ಮಹಿಳೆ ವಾಸವಾಗಿದ್ದ ಗ್ರಾಮದ ಬೀದಿಯನ್ನ ಸೀಲ್ ಡೌನ್ ಮಾಡಲಾಗಿದೆ.
ಇನ್ನು ತೊರವಳ್ಳಿ ಗ್ರಾಮದಲ್ಲಿ ಔಷಧಿ ಸಿಂಪಡಣೆ ಮಾಡಲಾಗಿದ್ದು, ಸೋಕಿತ ಮಹಿಳೆಯ ಸಂಪರ್ಕದಲ್ಲಿದ್ದರನ್ನ ಕ್ವಾರಂಟೈನ್ ಮಾಡಲಾಗಿದೆ. ಕೆಲ ಇಲಾಖೆ ಕಾರ್ಯಕ್ರಮಗಳ ಹಿನ್ನೆಲೆ ಸೋಂಕಿತ ಮಹಿಳೆ ಹಲವರ ಸಂಪರ್ಕ ಹೊಂದಿದ್ದು, ಹೀಗಾಗಿ ಸೋಂಕಿತ ಮಹಿಳೆಯ ಟ್ರಾವಲ್ ಹಿಸ್ಟರಿ ತಾಲ್ಲೂಕು ಆಡಳಿತಕ್ಕೆ ತಲೆ ನೋವಾಗಿ ಪರಿಣಮಿಸಿದೆ.
ಇನ್ನು ಹೆಚ್.ಡಿ ಕೋಟೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 21ಕ್ಕೆ ಏರಿಕೆಯಾಗಿದ್ದು ತಾಲ್ಲೂಕು ವೈದ್ಯಾಧೀಕಾರಿ ಡಾ. ರವಿಕುಮಾರ್ ನೇತೃತ್ವದಲ್ಲಿ ಎಲ್ಲಾ ಸೋಂಕಿತರನ್ನ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ.
Key words: mysore- HD Kote- asha worker- corona positive