ಮೈಸೂರು,ಜು,28,2020(www.justkannada.in): ಮೈಸೂರು ಜಿಲ್ಲೆ ಹೆಚ್.ಡಿ ಕೋಟೆ ತಾಲೂಕು ಕೇಂದ್ರ ಸ್ಥಾನದ ಸರ್ಕಲ್ ಇನ್ಸ್ ಪೆಕ್ಟರ್ ಪುಟ್ಟಸ್ವಾಮಿ ಅವರು ಕೊರೋನಾ ಸೋಂಕಿನಿಂದ ಗುಣಮುಖರಾಗಿ ಮೈಸೂರಿನ ಜೆಎಸ್ ಎಸ್ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಹೆಚ್ ಡಿ ಕೋಟೆ ತಾಲೂಕು ಸರ್ಕಲ್ ಇನ್ಸ್ ಪೆಕ್ಟರ್ ಪುಟ್ಟಸ್ವಾಮಿ ಅವರಲ್ಲಿ ಮೊಟ್ಟಮೊದಲ ಬಾರಿಗೆ ಕೊರೋನ ಪಾಸಿಟೀವ್ ದೃಡಪಟ್ಟಿತ್ತು, ಈ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ಸುಮಾರು ಒಂದು ತಿಂಗಳ ಹಿಂದೆ ಮೈಸೂರಿನ ಜಿಲ್ಲಾ ಕೊವಿಡ್ ಆಸ್ಪತ್ರೆಗೆ ಸ್ಥಳಾಂತರಿಸಿಲಾಗಿತ್ತು, ಕಳೆದ ಸುಮಾರು ಒಂದು ತಿಂಗಳಿನಿಂದ ಸತತವಾಗಿ ಚಿಕಿತ್ಸೆ ನೀಡಲಾಗಿತ್ತಾದರೂ ಕೂಡಾ ತೀವ್ರವಾಗಿ ನಿತ್ರಾಣಗೊಂಡ ಸರ್ಕಲ್ ಇನ್ಸ್ಪೆಕ್ಟರ್ ಪುಟ್ಟಸ್ವಾಮಿ ಅವರನ್ನು ಕೋವಿಡ್ ಆಸ್ಪತ್ರೆಯಿಂದ ಮೈಸೂರಿನ ಜೆ ಎಸ್ ಎಸ್ ಆಸ್ಪತ್ರೆಗೆ ಸ್ಥಳಾಂತರಿಸಿ ನಿರಂತರ ಚಿಕಿತ್ಸೆ ನೀಡಿದ ಹಿನ್ನೆಲೆಯಲ್ಲಿಗುಣಮುಖರಾದ ಪುಟ್ಟಸ್ವಾಮಿ ಅವರನ್ನು ಇಂದು ಮೈಸೂರಿನ ಜೆಎಸ್ಎಸ್ ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಯಿತು.
ಈ ಸಂದರ್ಭದಲ್ಲಿ ಜೆ.ಎಸ್.ಎಸ್ ಆಸ್ಪತ್ರೆಯ ಆಡಳಿತಾಧಿಕಾರಿಗಳು ಮತ್ತು ಪೊಲೀಸ್ ಹಿರಿಯ ಅಧಿಕಾರಿಗಳಿಗೆ ಅಭಿನಂದನಾ ಸಮಾರಂಭ ಹಾಗೂ ಬೀಳ್ಕೊಡುಗೆ ನೀಡಲಾಯಿತು. ಈ ಸಂದರ್ಭದಲ್ಲಿ ಸೋಂಕಿತರಿಗೆ ಆಸ್ಪತ್ರೆ ಆಡಳಿತಾಧಿಕಾರಿಗಳು ಹೃದಯಪೂರ್ವಕ ಅಭಿನಂದನೆಗಳು ಸಲ್ಲಿಸಿದರು. ಈ ವೇಳೆ ಮೈಸೂರು ಡಿಸಿ ಅಭಿರಾಂ ಜೀ ಶಂಕರ್, ಮೈಸೂರು ಎಸ್ಪಿ ರಿಷ್ಯಂತ್ ಅವರು ಸೇರಿ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.
ಒಟ್ಟಾರೆ ಹಸಿರು ಝೋನ್ ನಲ್ಲಿದ್ದ ಎಚ್ ಡಿ ಕೋಟೆ ತಾಲೂಕಿನಲ್ಲಿ, ಪೊಲೀಸ್ ಸರ್ಕಲ್ ಇನ್ಸ್ಪೆಕ್ಟರ್ ಪುಟ್ಟಸ್ವಾಮಿ ಅವರಿಗೆ ಮೊಟ್ಟಮೊದಲು ಕೊರೋನಾ ಪಾಸಿಟೀವ್ ಕಂಡುಬಂದಿದ್ದು, ತಾಲೂಕಿನ ಜನತೆ ಮತ್ತು ಪೊಲೀಸ್ ಇಲಾಖೆ ಸಿಬ್ಬಂದಿಗಳಲ್ಲಿ ಭಯ ಉಂಟು ಮಾಡಿತ್ತು, ಇದೀಗ ಸರ್ಕಲ್ ಇನ್ಸ್ಪೆಕ್ಟರ್ ಪುಟ್ಟಸ್ವಾಮಿ ಅವರು ಸಂಪೂರ್ಣವಾಗಿ ಗುಣಮುಖರಾಗಿರುವುದು ಜನರಲ್ಲಿ ಮತ್ತು ಸಿಬ್ಬಂದಿಗಳಲ್ಲಿ ಹರ್ಷ ಮೂಡಿಸಿದೆ.
Key words: mysore- hd kote- circle inspector-corona –cure-JSS hospital