ಮೈಸೂರು,ಮೇ,30,2020(www.justkannada.in): ಮೈಸೂರು ಜಿಲ್ಲೆ ಹುಣಸೂರು ಪಟ್ಟಣದಲ್ಲಿ ಕಿಡಿಗೇಡಿಗಳು ಅಂಬೇಡ್ಕರ್ ಭಾವಚಿತ್ರಕ್ಕೆ ಸಗಣಿ ಎರಚಿ ಅಪಮಾನವೆಸಗಿರುವ ಘಟನೆ ನಡೆದಿದೆ.
ಹುಣಸೂರಿನ ಬನ್ನಿಬೀದಿ ಸರ್ಕಲ್ ನಲ್ಲಿ ರಾತ್ರಿ ಈ ಘಟನೆ ನಡೆದಿದೆ. ರಾತ್ರಿ ಯಾರೋ ಕಿಡಿಗೇಡಿಗಳು ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಸಗಣಿ ಎರಚಿ ಪರಾರಿಯಾಗಿದ್ದು, ಸ್ಥಳಕ್ಕೆ ಡಿವೈಎಸ್ ಪಿ ಸುಂದರ್ ರಾಜ್ ಸೇರಿ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಕೃತ್ಯವೆಸಗಿರುವ ಕಿಡಿಗೇಡಿಗಳನ್ನ ಬಂಧಿಸುವಂತೆ ದಲಿತ ಸಂಘಟನೆ ಮುಖಂಡರು ಆಗ್ರಹಿಸಿದ್ದು, ಸ್ಥಳದಲ್ಲಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
Key words: mysore- hunsur- Insult –B.R Ambedkar- arrest – mischief.