ಮೈಸೂರು,ಡಿ,23,2019(www.justkannada.in): ಸರ್ಕಾರದ ಅನುದಾನಗಳು ವ್ಯರ್ಥವಾಗದಂತೆ ಯೋಜನೆ ಅನುಷ್ಠಾನಕ್ಕೆ ತರುವ ಕುರಿತು ಸಭೆಯಲ್ಲಿ ಚರ್ಚಿಸಲಾಗಿದೆ. ಈ ಎಲ್ಲಾ ಅಂಶಗಳನ್ನು ಪಟ್ಟಿ ಮಾಡಿ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ರಾಜ್ಯ ಯೋಜನಾ ಮಂಡಳಿ ಉಪಾಧ್ಯಕ್ಷ ಬಿ.ಜೆ.ಪುಟ್ಟಸ್ವಾಮಿ ತಿಳಿಸಿದರು.
ರಾಜ್ಯ ಗ್ರಾಮೀಣಾಭಿವೃದ್ಧಿ ಸಂಸ್ಥೆ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರಾಜ್ಯ ಯೋಜನಾ ಮಂಡಳಿ ಉಪಾಧ್ಯಕ್ಷ ಬಿ.ಜೆ.ಪುಟ್ಟಸ್ವಾಮಿ, ರಾಜ್ಯ ಯೋಜನಾ ಮಂಡಳಿ ಸಂಬಂಧ ಮೈಸೂರಿನಲ್ಲಿ ಸಭೆ ನಡೆಸಲಾಗಿದೆ. ಯೋಜನಾ ಚಟುವಟಿಕೆಗಳಿಗೆ ಸಂಬಂಧಿಸಿದ ಕಾರ್ಯಕ್ಷೇತ್ರ ಹಾಗೂ ಸಲಹೆಗಳ ಹಾಗೂ ಕ್ರಮಗಳ ಕುರಿತು ಚರ್ಚೆ ನಡೆಸಲಾಗಿದೆ. ರಾಜ್ಯದ ಅಭಿವೃದ್ಧಿಗೆ ಯೋಜನಾ ಮಂಡಳಿಯ ಪಾತ್ರ ಹಾಗೂ ಸಮನ್ವಯತೆಯ ಅಂಶಗಳನ್ನು ಗುರುತಿಸಲಾಗಿದೆ. ಯೋಜನಾ ಪ್ರಕ್ರಿಯೆಗಳಿಗೆ ಕಾಲಮಿತಿ ಅಗತ್ಯ. ಯೋಜನೆಗಳನ್ನು ತಳಮಟ್ಟದ ವರೆಗೂ ತಲುಪಿಸುವ ಕುರಿತು ಚರ್ಚೆ ಮಾಡಲಾಗಿದೆ ಎಂದು ತಿಳಿಸಿದರು.
ಹಾಗೆಯೇ ಇತರ ರಾಜ್ಯಗಳ ಯೋಜನಾ ಪ್ರಕ್ರಿಯೆಗಳನ್ನು ಅಧ್ಯಯನ ಮಾಡಲಾಗುವುದು. ಸರ್ಕಾರದ ಅನುದಾನಗಳು ವ್ಯರ್ಥವಾಗದಂತೆ ಯೋಜನೆ ಅನುಷ್ಠಾನಕ್ಕೆ ತರುವ ಕುರಿತು ಸಭೆಯಲ್ಲಿ ಚರ್ಚಿಸಲಾಗಿದ್ದು. ಈ ಎಲ್ಲಾ ಅಂಶಗಳನ್ನು ಪಟ್ಟಿ ಮಾಡಿ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ಬಿ.ಜೆ.ಪುಟ್ಟಸ್ವಾಮಿ ಹೇಳಿದರು.
Key words: mysore- implementation – plan – government grants- State Planning Board- Vice President- BJ Puttswamy