MYSORE INFOSYS: ಚಿರತೆ ಪತ್ತೆಗೆ ಡ್ರೋನ್ ಕ್ಯಾಮರಾ ಬಳಕೆ – ಸಚಿವ ಈಶ್ವರ ಬಿ ಖಂಡ್ರೆ

MYSORE INFOSYS: Drone camera used to detect leopard - Minister Eshwar B Khandre As soon as the matter was reported, a leopard task force team was sent to capture the leopard. The team includes veterinarians, and 40 personnel trained in leopard capture. Forest officials from the wildlife department are also at the spot and are supervising the operation.

 

ಬೀದರ್, ಡಿ.31: ಮೈಸೂರು ನಗರದ ಇನ್ಫೋಸಿಸ್ ಆವರಣದಲ್ಲಿ ಇಂದು ನಸುಕಿನ 4.30ರ ಸುಮಾರಿನಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಇದರ ಸೆರೆಗೆ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

ವಿಷಯ ತಿಳಿದ ಕೂಡಲೇ ಚಿರತೆ ಸೆರೆ ಹಿಡಿಯಲು ಚಿರತೆ ಕಾರ್ಯಪಡೆ ತಂಡವನ್ನು ಕಳುಹಿಸಲಾಗಿದೆ. ತಂಡದಲ್ಲಿ ಪಶುವೈದ್ಯರು, ಚಿರತೆ ಸೆರೆ ತರಬೇತಿ ಪಡೆದ 40 ಸಿಬ್ಬಂದಿ ಇದ್ದಾರೆ. ವನ್ಯಜೀವಿ ವಿಭಾಗದ ಅರಣ್ಯಾಧಿಕಾರಿಗಳೂ ಸ್ಥಳದಲ್ಲಿದ್ದು, ಕಾರ್ಯಾಚರಣೆಯ ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಸಿಸಿ ಟಿವಿಯಲ್ಲಿ ಚಿರತೆ ಸಂಚಾರದ ದೃಶ್ಯಗಳು ಸೆರೆಯಾಗಿದ್ದು, ಇಂದು ಮಧ್ಯಾಹ್ನ 12ರ ಸುಮಾರಿನಲ್ಲಿ ಚಿರತೆ ಇರುವಿಕೆ ಖಚಿತವಾದ ಹಿನ್ನೆಲೆಯಲ್ಲಿ ತುರ್ತು ಕಾರ್ಯಾಚರಣೆಗೆ ಸೂಚನೆ ನೀಡಲಾಗಿದೆ. ಇನ್ಫೋಸಿಸ್ ತನ್ನ ಉದ್ಯೋಗಿಗಳಿಗೆ ಮನೆಯಿಂದಲೇ ಕಾರ್ಯ ನಿರ್ವಹಿಸಲು ಅವಕಾಶ ನೀಡಿದ್ದು ಆತಂಕ ಪಡುವ ಅಗತ್ಯವಿಲ್ಲ.  ಅರಣ್ಯ ಇಲಾಖೆ ಸಿಬ್ಬಂದಿ ಬಲೆ, ಅರವಳಿಕೆ ಔಷಧದೊಂದಿಗೆ ಸಜ್ಜಾಗಿದ್ದಾರೆ.

ಇನ್ಫೋಸಿಸ್ ಆವರಣ ಸುಮಾರು 350 ಎಕರೆಯಷ್ಟಿದ್ದು,  ಕೆಲವು ಭಾಗ ಕಾಡಿನಂತೆಯೇ ಇದೆ. ಇಲ್ಲಿ ಕಾರ್ಯಾಚರಣೆ ಸಾಹಸವೇ ಸರಿ. ಆದರೂ ಕಾರ್ಯಾಚರಣೆ ನಡೆಯುತ್ತಿದೆ. ಚಿರತೆ ಸಮೀಪದ ವಸತಿ ಪ್ರದೇಶಗಳಿಗೆ ನುಗ್ಗದಂತೆ ಸಹ ಕ್ರಮ ವಹಿಸಲಾಗಿದೆ. ಚಿರತೆ ಪತ್ತೆಗೆ ಥರ್ಮಲ್ ಕ್ಯಾಮರಾ ಅಳವಡಿಸಿದ ಡ್ರೋನ್ ಸಹ ಬಳಸಲಾಗುತ್ತಿದೆ.

ಅರಣ್ಯ ಇಲಾಖೆ ಸಿಬ್ಬಂದಿ ಶೀಘ್ರವೇ ಚಿರತೆ ಸೆರೆ ಹಿಡಿದು ಜನರ ಆತಂಕ ದೂರ ಮಾಡುತ್ತಾರೆ ಎಂಬ ವಿಶ್ವಾಸವನ್ನು ಈಶ್ವರ ಖಂಡ್ರೆ ವ್ಯಕ್ತಪಡಿಸಿದ್ದಾರೆ.

KEY WORDS: MYSORE INFOSYS, Drone camera, detect, leopard, Minister Eshwar B Khandre

SUMMARY:

MYSORE INFOSYS: Drone camera used to detect leopard – Minister Eshwar B Khandre

As soon as the matter was reported, a leopard task force team was sent to capture the leopard. The team includes veterinarians, and 40 personnel trained in leopard capture. Forest officials from the wildlife department are also at the spot and are supervising the operation.