ಮೈಸೂರು,ಅಕ್ಟೋಬರ್,10,2020(www.justkannada.in): 2019 -20ನೇ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿಯಲ್ಲಿ ಅತಿಹೆಚ್ಚು ಅಂಕ ಗಳಿಸಿದ ಮೈಸೂರು ಜಿಲ್ಲಾ ಪತ್ರಕರ್ತರ ಪ್ರತಿಭಾನ್ವಿತ ಮಕ್ಕಳಿಗೆ ಸನ್ಮಾನ ಮಾಡಲಾಯಿತು.
ನಗರದ ಪತ್ರಕರ್ತರ ಭವನದಲ್ಲಿ ಮೈಸೂರು ಜಿಲ್ಲಾ ಪತ್ರಕರ್ತರ ಪ್ರತಿಭಾನ್ವಿತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜಿಸಲಾಗಿತ್ತು. 2019-20ನೇ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿಯಲ್ಲಿ ಅತಿಹೆಚ್ಚು ಅಂಕ ಗಳಿಸಿದ ಮಕ್ಕಳಿಗೆ ಸನ್ಮಾನ ಮಾಡಲಾಯಿತು. ಹತ್ತು ಪ್ರತಿಭಾನ್ವಿತ ಮಕ್ಕಳನ್ನು ಸನ್ಮಾನಿಸಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಶಾಸಕ ಜಿ.ಟಿ ದೇವೇಗೌಡರ ಪುತ್ರ ಹರೀಶ್ ಗೌಡ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ನಗರ ಪೊಲೀಸ್ ಆಯುಕ್ತ ಚಂದ್ರಗುಪ್ತ, ಪತ್ರಕರ್ತರ ಸಂಘದ ಅಧ್ಯಕ್ಷ ಸಿ.ಕೆ ಮಹೇಂದ್ರ ಹಾಗೂ ಇತರರು ಭಾಗಿಯಾಗಿದ್ದರು.
ಈ ವೇಳೆ ಮಾತನಾಡಿದ ಶಿವನಂದಾ ತಗಡೂರು, ಖ್ಯಾತ ಹಿರಿಯ ಪತ್ರಕರ್ತ ದಿ.ರಾಜಶೇಖರ ಕೋಟಿ ಹೆಸರಿನಲ್ಲಿ ಪ್ರಶಸ್ತಿ ನೀಡಲು ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧರಿಸಿದೆ. ಎಲ್ಲಾ ಕಾರ್ಯನಿರತ ಪತ್ರಕರ್ತರಿಗೂ ಕೂಡ ರಾಜ್ಯ ಸರ್ಕಾರದಿಂದ ಹೆಲ್ತ್ ಕಾರ್ಡ್ ದೊರೆಯಲಿದೆ. ಇಂದಿನ ಪತ್ರಿಕೋದ್ಯಮ ಸಮೂಹ ಮಾಧ್ಯಮಗಳ ಹೊಡೆತಕ್ಕೆ ಸಿಲುಕಿವೆ. ಇವೆಲ್ಲವನ್ನು ಮೆಟ್ಟಿ ನಿಲ್ಲುವ ಪರಿಸ್ಥಿತಿ ಪತ್ರಕರ್ತರಿಗೆ ಎದುರಾಗಿದೆ. ಕಿರಿಯ ಪತ್ರಕರ್ತರು ಹಿರಿಯ ಪತ್ರಕರ್ತರ ಮಾರ್ಗದರ್ಶನದಲ್ಲಿ ವಸ್ತುನಿಷ್ಠ ವರದಿ ನೀಡುವಲ್ಲಿ ಗಮನ ಹರಿಸಬೇಕು. ಬ್ರೇಕಿಂಗ್ ನೀಡುವ ಧಾವಂತದಲ್ಲಿ ಸಾಕಷ್ಟು ಮುಜುಗರಕ್ಕೆ ಒಳಗಾಗಿರುವ ಪ್ರಸಂಗಗಳು ನಡೆದಿದೆ. ಪತ್ರಕರ್ತರು ಬಹಳ ಎಚ್ಚರಿಕೆಯಿಂದ ಸಮಾಜಕ್ಕೆ ತಪ್ಪು ಸಂದೇಶ ನೀಡದಂತೆ ಕೆಲಸ ಮಾಡಬೇಕಿದೆ ಎಂದು ಸಲಹೆ ನೀಡಿದರು.
Key words: mysore- Journalists- children – Talent –award- Mysore District Journalists Association