ಮೈಸೂರು,ನವೆಂಬರ್,14,2020(www.justkannada.in): ಕಪಿಲಾ ನದಿ ಪಕ್ಕದಲ್ಲೇ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದೆ. ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಗೋಳೂರು ಗ್ರಾಮಸ್ಥರು ಕುಡಿಯುವ ನೀರು ಬಿಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ.
ನಂಜನಗೂಡು ತಾಲ್ಲೂಕು ಪಂಚಾಯತಿ ಮುಂಭಾಗ ಜಮಾಯಿಸಿದ ಗೋಳೂರು ಗ್ರಾಮಸ್ಥರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ ಎರಡು ವಾರಗಳಿಂದ ಗ್ರಾಮಸ್ಥರು ನೀರಿನ ಸಮಸ್ಯೆ ಎದುರಿಸುತ್ತಿದ್ದು, ಅಧಿಕಾರಿಗಳ ನಿರ್ಲಕ್ಷ್ಯದಿಂದ ಈ ರೀತಿಯ ಸಮಸ್ಯೆಯಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.
ಈ ನಡುವೆ ಗ್ರಾಮದಲ್ಲಿ ವಾಟರ್ ಮ್ಯಾನ್ ಇದ್ದರೂ ಸರಿಯಾಗಿ ಕೆಲಸ ನಿರ್ವಹಿಸುತ್ತಿಲ್ಲ. ಹೀಗಾಗಿ ಗ್ರಾಮದಲ್ಲಿ ನೀರಿನ ತೊಂದರೆ ಉಂಟಾಗಿದೆ. ದೀಪಾವಳಿ ಹಬ್ಬ ಸಮೀಸುತ್ತಿದ್ದು ಕೂಡಲೇ ನೀರು ಬಿಡಿಸುವಂತೆ ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.
Key words: mysore- Kapila River- Drinking water – Protest – villagers