ನನ್ನ ಅವಧಿಯ ದಾಖಲೆ ತರುವಂತೆ ಅಧಿಕಾರಿಗಳಿಗೆ ಹೆದರಿಸುತ್ತಿದ್ದಾರೆ- ಡಿ.ಕೆ ಶಿವಕುಮಾರ್ ಗಂಭೀರ ಆರೋಪ.

ಮೈಸೂರು,ಸೆಪ್ಟಂಬರ್,15,2022(www.justkannada.in):  ನನ್ನ ಅವಧಿಯ ದಾಖಲೆ ತರುವಂತೆ ಇಂಧನ ಇಲಾಖೆ ಅಧಿಕಾರಿಗಳಿಗೆ ಹೆದರಿಸುತ್ತಿದ್ದಾರೆ. ಇದಕ್ಕೆ ನಾವು ಹೆದರುವುದಿಲ್ಲ ಎಂದು ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಟಾಂಗ್ ನೀಡಿದರು.

ಮೈಸೂರಿನಲ್ಲಿ ಮಾತನಾಡಿದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಈ ‌ ಬಗ್ಗೆ ಕೆಲ ಅಧಿಕಾರಿಗಳು ನನಗೆ ಕರೆ ಮಾಡಿದ್ದರು. ನನ್ನ ಅವಧಿಯ ದಾಖಲೆ‌ ತರುವಂತೆ ಒತ್ತಡ ಹಾಕಲಾಗುತ್ತಿದೆ. ನಾನು ಎಲ್ಲಾ ದಾಖಲೆಗಳ‌ನ್ನು ಕೊಡಿ ಎಂದು ಹೇಳಿದ್ದೇನೆ.ತಪ್ಪು ಮಾಡಿದ್ದರೆ ನಾವೇ ಹಗ್ಗ ಸಹಾ ಕಳುಹಿಸಿಕೊಡುತ್ತೇವೆ. ಈ ಮೂಲಕ ಕಾಂಗ್ರೆಸ್ ಮತ್ತು ನನ್ನನ್ನು ಹೆದರಿಸಲು ಬಿಜೆಪಿ ಮುಂದಾಗಿದೆ. ನಾನು ಯಾವುದಕ್ಕೂ ಹೆದರುವವನಲ್ಲ. ಏನು ಬೇಕಾದರೂ ತನಿಖೆ ಮಾಡಿಕೊಳ್ಳಲಿ ಎಂದರು.

ಚಡ್ಡಿ, ಪ್ಯಾಂಟು, ಹಾಸಿಗೆ, ಮೊಟ್ಟೆ ಇತ್ಯಾದಿ ಇತ್ಯಾದಿ ಎಲ್ಲಾ ತನಿಖೆ ಮಾಡಲಿ.

ಸಿಎಂ ಬಸವರಾಜ ಬೊಮ್ಮಾಯಿ ಸಮಗ್ರ ತನಿಖೆ ಹೇಳಿಕೆಗೆ ವ್ಯಂಗ್ಯವಾಡಿದ ಡಿ.ಕೆ ಶಿವಕುಮಾರ್.  ಚಡ್ಡಿ, ಪ್ಯಾಂಟು, ಹಾಸಿಗೆ, ಮೊಟ್ಟೆ ಇತ್ಯಾದಿ ಇತ್ಯಾದಿ ಎಲ್ಲಾ ತನಿಖೆ ಮಾಡಲಿ. ನಾನು ಎಲ್ಲದಕ್ಕೂ ಸಿದ್ದನಾಗಿದ್ದೇನೆ. ಮೂರು ವರ್ಷ ಬೇಕಿತ್ತಾ ತನಿಖೆ ಆರಂಭಿಸಲು ? ಎಂದು ಪ್ರಶ್ನಿಸಿದರು.

ದಾಖಲೆ ಮುಚ್ಚಿಟ್ಟಿದ್ದಾರೆ ಎಂಬ ಬಿಜೆಪಿ ಆರೋಪ ವಿಚಾರ ಕುರಿತು ಪ್ರತಿಕ್ರಿಯಿಸಿದ ಡಿ.ಕೆ ಶಿವಕುಮಾರ್, ಉತ್ತು, ಹಾರೆ ತೆಗೆದುಕೊಂಡು, ಬುಲ್ಡೋಜರ್‌ ನಲ್ಲಿ ಅಗೆಯಲಿ, ಬೋರ್ ತೆಗೆಸಲಿ ನಮಗೇನು ಸಮಸ್ಯೆ ಇಲ್ಲ ಎಂದು  ಲೇವಡಿ ಮಾಡಿದರು.

ಪ್ರಚಾರಕ್ಕಾಗಿ  ಮತಾಂತರ ನಿಷೇಧ ಕಾಯ್ದೆ ಮಂಡನೆ.

ಇಂದು ಪರಿಷತ್‌ ನಲ್ಲಿ ಮತಾಂತರ ನಿಷೇಧ ಕಾಯ್ದೆ ಮಂಡನೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಡಿ.ಕೆ ಶಿವಕುಮಾರ್, ರಾಜ್ಯದಲ್ಲಿ ಎಲ್ಲಿ ಮತಾಂತರ ನಡೆಯುತ್ತಿದೆ ? ಪ್ರಚಾರಕ್ಕಾಗಿ ಬಿಜೆಪಿ ಮಂಡನೆ ಮಾಡುತ್ತಿದೆ. ಇದರಿಂದ ಯಾವುದೇ ಪ್ರಯೋಜನವಿಲ್ಲ. ಅಲ್ಪಸಂಖ್ಯಾತರಿಗೆ ಭಯ ಹುಟ್ಟಿಸಲು ಕಾಯ್ದೆ ಮಂಡಿಸಲಾಗುತ್ತಿದೆ. ಭಾವನಾತ್ಮಕ ವಿಚಾರವನ್ನು ಕೆರಳಿಸಲು ಮಂಡನೆ. ಕಾಯ್ದೆ ಈ ಹಿಂದೆಯೇ ಇತ್ತು. ದೇಶ ರಾಜ್ಯ ವಿಭಜನೆ ಮಾಡಲು ಬಿಜೆಪಿ ಮುಂದಾಗಿದೆ. ಜಾತಿ ಧರ್ಮವನ್ನು ಒಡೆಯಲು ಹುನ್ನಾರ ಮಾಡುತ್ತಿದೆ. ಹಿಂದೂ ಧರ್ಮದ ಓಲೈಕೆ ಹಾಗೂ ಹೈ ಕಮಾಂಡ್ ಮೆಚ್ಚಿಸಲು ಮಂಡನೆ ಮಾಡುತ್ತಿದೆ ಎಂದು ಆರೋಪಿಸಿದರು.

Key words: mysore-kpcc-president- DK Shivakumar -bjp

ENGLISH SUMMARY….

“They are threatening the officials to bring the documents when I was in power: DKS charges serious allegation
Mysuru, September 15, 2022 (www.justkannada.in): “The Energy Department officials are being pressurized to provide the documents when I was in power. But we are afraid of it,” observed KPCC President D.K. Shivakumar.
Speaking in Mysuru today, D.K. Shivakumar said a few officers had called me regarding this. They are being pressurized to provide the documents when I was the Energy Minister. I have asked them to provide all the documents. If we have committed any mistake, we ourselves will send them a rope also. It is a new plan of the BJP to threaten me and Congress party. However, I am not scared of anything. Let them undertake whatever investigation they want.”
Ridiculing CM Basavaraj Bommai’s statement of undertaking a thorough investigation, D.K. Shivakumar said, let them check everything, including half pants, trousers, bed, eggs, etc. I am ready for everything. Did they require three years to conduct the investigation?” he questioned.
Keywords: KPCC President/ D.K. Shivakumar/ BJP/ plan/ investigation