ಮೈಸೂರು,ಸೆಪ್ಟಂಬರ್,21,2020(www.justkannada.in): ಮೈಸೂರಿನ ಹುಣಸೂರು ರಸ್ತೆಯ ಪ್ರೀಮಿಯರ್ ಸ್ಟುಡಿಯೋ ಸಿಗ್ನಲ್ ಬಳಿ ಇರುವ ಮ್ಯಾನ್ ಹೋಲ್ ಬಾರಿ ಮಳೆಗೂ ಮುನ್ನವೇ ತುಂಬಿ ಹರಿಯುತ್ತಿದ್ದು ಸ್ಥಳದಲ್ಲಿ ಸಾರ್ವಜನಿಕರು ಮೂಗು ಮುಚ್ಚಿಕೊಂಡು ಓಡಾಡುತ್ತಿರುವ ಪರಿಸ್ಥಿತಿ ನಿರ್ಮಾಣವಾಗಿದೆ.
ಹುಣಸೂರು ರಸ್ತೆಯ ಪ್ರೀಮಿಯರ್ ಸ್ಟುಡಿಯೋ ಸಿಗ್ನಲ್ ಬಳಿಯಿರುವ ಮ್ಯಾನ್ ಹೋಲ್ ತುಂಬಿ ರಸ್ತೆಯಲ್ಲಿ ಕೊಳಚೆ ನೀರು ಹರಿಯುತ್ತಿದ್ದು, ಈ ಬಗ್ಗೆ ಪಾಲಿಕೆ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ. ಜತೆಗೆ ಕಳೆದ ಒಂದು ತಿಂಗಳಿನಿಂದಲೂ ಕೊಳಚೆ ನೀರು ರಸ್ತೆಗೆ ಹರಿಯುತ್ತಿದ್ದರೂ ಸ್ಥಳೀಯ ಜನಪ್ರತಿನಿಧಿಗಳು ಮಾತ್ರ ಇತ್ತ ಕಡೆ ಗಮನ ಹರಿಸಿಲ್ಲ ಎಂದು ಸ್ಥಳೀಯರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ರಸ್ತೆಯಲ್ಲಿ ಕೊಳಚೆ ನೀರು ಹರಿಯುತ್ತಿರುವ ಹಿನ್ನೆಲೆ, ಸ್ಥಳದಲ್ಲಿ ಪಾದಾಚಾರಿಗಳು ಮೂಗು ಮುಚ್ಚಿಕೊಂಡು ಓಡಾಡುತ್ತಿದ್ದು, ಕೂಡಲೇ ಸಮಸ್ಯೆ ಬಗೆಹರಿಸುವಂತೆ ಪಾಲಿಕೆ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳಿಗೆ ಸ್ಥಳೀಯರು ಮನವಿ ಮಾಡಿದ್ದಾರೆ.
Key words: mysore-Manhole- filled -sewage – road-outrage