ಮೈಸೂರು,ಸೆಪ್ಟಂಬರ್,29,2020(www.justkannada.in): ಗಾಂಜಾ ಸಾಗಿಸುತ್ತಿದ್ದ ಆರೋಪಿಗಳನ್ನ ಮೈಸೂರಿನ ಕೆ.ಆರ್ ಠಾಣಾ ಪೊಲೀಸರು ಬಂಧಿಸಿ ಗಾಂಜಾ ಸಾಗಿಸುತ್ತಿದ್ದ ವಾಹನವನ್ನ ವಶಕ್ಕೆ ಪಡೆದಿದ್ದಾರೆ.
ಮಹಮ್ಮದ್ ಶಫಿ, ಮಹಮ್ಮದ್ ಅಲಿ, ಮಜೀದ್, ಇಬ್ರಾಹಿಂ ಕುಟ್ಟಿ ಬಂಧಿತ ಆರೋಪಿಗಳು. ಆರೋಪಿಗಳ ಬಳಿ ಇದ್ದ 85 ಕೆಜಿ ಗಾಂಜಾವನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಗಳು ಬೊಲೆರೊ ವಾಹನದಲ್ಲಿ ಆಂಧ್ರಪ್ರದೇಶದಿಂದ ಕೇರಳಕ್ಕೆ ಮೈಸೂರಿನ ಮೂಲಕ ಗಾಂಜಾ ಸಾಗಿಸುತ್ತಿದ್ದರು. ಈ ವೇಳೆ ಪೊಲೀಸರ ಕೈಗೆ ಆರೋಪಿಗಳು ಸಿಕ್ಕಿ ಬಿದ್ದಿದ್ದಾರೆ.
ಮೈಸೂರಿನ ಏರ್ಪೋರ್ಟ್ ಬಳಿ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆಯಲ್ಲಿ ಆರೋಪಿಗಳು ಸಿಕ್ಕಿಬಿದ್ದಿದ್ದು, ಬಂಧಿತರೆಲ್ಲರೂ ಕೇರಳ ಮೂಲದವರು ಎನ್ನಲಾಗಿದೆ. ಇನ್ಸ್ಪೆಕ್ಟರ್ ಕೆ. ಆರ್. ರಘು ನೇತೃತ್ವದಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ.
Key words: mysore-marijuana-accused- arrest-Police- seized