ಮೈಸೂರು,ಜೂ,8,2020(www.justkannada.in): ನಂಜನಗೂಡಿನಲ್ಲಿ ಏರ್ಪಡಿಸಲಾಗಿದ್ದ ಆಶಾ ಕಾರ್ಯಕರ್ತೆಯರಿಗೆ ಗೌರವಧನ ನೀಡುವ ಕಾರ್ಯಕ್ರಮಕ್ಕೆ ಚೆಕ್ ವಿತರಣೆ ಮಾಡುವ ಮೂಲಕ ಸಹಕಾರ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಅವರು ಚಾಲನೆ ನೀಡಿದರು.
ಶಾಸಕ ಹರ್ಷವರ್ಧನ್ ಮಾತನಾಡಿ, ಕೊರೋನಾ ಈಗ ನಿಯಂತ್ರಣಕ್ಕೆ ಬಂದಿರಬಹುದು. ಆದರೆ, ಇದಕ್ಕೆ ಔಷಧಿ ಬರುವವರೆಗೆ ನಾವು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳೋಣ. ಮಾಸ್ಕ್ ಧರಿಸಿಯೇ ಓಡಾಡೋಣ, ಸ್ಯಾನಿಟೈಸರ್ ಬಳಸೋಣ ಎಂದು ತಿಳಿಸಿದರು.
ಜಿಲ್ಲಾಧಿಕಾರಿ ಅಭಿರಾಂ ಜಿ. ಶಂಕರ್ ಮಾತನಾಡಿ, ನಂಜನಗೂಡಿನಲ್ಲಿನ ಕೊರೋನಾ ಸೋಂಕು ಪತ್ತೆಯಾದ ದಿನದಿಂದ ಇಲ್ಲಿನ ಜನತೆ ಸಾಕಷ್ಟು ತೊಂದರೆಗಳನ್ನು ಅನುಭವಿಸಿದ್ದಾರೆ. ಎಲ್ಲ ಕಡೆ ಲಾಕ್ ಡೌನ್ ಸಡಿಲಗೊಳಿಸಿದ್ದರೂ ನಂಜನಗೂಡಿನಲ್ಲಿ ಕಠಿಣ ನಿಲುವನ್ನು ಸಡಿಲಗೊಳಿಸಿರಲಿಲ್ಲ. ಆದರೂ ತಾಲೂಕಿನ ಜನತೆ ಸಹಾಕಾರ ನೀಡಿದ್ದನ್ನು ಮರೆಯಲಾಗದು. ಇನ್ನು ಮುಂದೂ ಸಹ ಸವಾಲುಗಳು ಇರಲಿದ್ದು, ದಯಮಾಡಿ ಎಲ್ಲರೂ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡು ಆರೋಗ್ಯ ಕಾಪಾಡಿಕೊಳ್ಳಿ ಎಂದು ಸಲಹೆ ನೀಡಿದರು.
ಎಂಡಿಸಿಸಿ ಬ್ಯಾಂಕ್ ಅಧ್ಯಕ್ಷ ಹರೀಶ್ ಗೌಡ ಮಾತನಾಡಿ, ಕೊರೋನಾ ನಿಯಂತ್ರಣಕ್ಕೆ ಬರುವಲ್ಲಿ ಆಶಾ ಕಾರ್ಯಕರ್ತೆಯರ ಪಾತ್ರ ಬಹಳಷ್ಟಿದೆ. ಅವರ ಸೇವೆಗೆ ಗೌರವ ಸೂಚಿಸುವ ನಿಟ್ಟಿನಲ್ಲಿ ಸಹಕಾರ ಇಲಾಖೆಯೊಂದರಿಂದಲೇ 3 ಸಾವಿರ ರೂಪಾಯಿ ಗೌರವಧನ ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಇದರ ಹಿಂದೆ ಸಹಕಾರ ಸಚಿವರಾದ ಸೋಮಶೇಖರ್ ಅವರ ಶ್ರಮ ಇದೆ ಎಂದು ಹೇಳಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್, ಜಿಲ್ಲಾ ಪಂಚಾಯಿತಿ ಸಿಇಒ ಪ್ರಶಾಂತ್ ಕುಮಾರ್ ಬಿಸ್ವಾಸ್ ಇತರ ಪ್ರಮುಖರು ಇದ್ದರು.
Key words: mysore-Minister -ST Somashekhar –distributed- relief -Asha worker